ಬೆಂಗಳೂರು: ಜೆಡಿಎಸ್ ಮುಖಂಡ, ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್.ಧರ್ಮೇಗೌಡರ ನಿಧಾನ ಜೆಡಿಎಸ್ ಕಾರ್ಯಕರ್ತರಿಗೆ ಅತೀವ ನೋವು ತಂದಿದೆ. ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಪಕ್ಷದ ಮುಖಂಡರು ಕಂಬನಿ ಮಿಡಿದಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಉಪಸಭಾಪತಿ ನಿಧನ ಬಗ್ಗೆ ಟ್ವೀಟ್ ಮಾಡುವ ಮೂಲಕ ವಿಷಾದ ವ್ಯಕ್ತಪಡಿಸಿದ್ದಾರೆ. ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡರ ಆತ್ಮಹತ್ಯೆ ಸುದ್ದಿ ಆಘಾತ ತಂದಿದೆ. ಸಜ್ಜನ, ಸನ್ನಡತೆಯ ಉಪಸಭಾಪತಿಗಳನ್ನು ಕಳೆದುಕೊಂಡದ್ದು ನಮ್ಮ ರಾಜ್ಯಕ್ಕೆ ನಷ್ಟ. ಅವರ ಕುಟುಂಬ ಹಾಗೂ ಬಂಧುಮಿತ್ರರಿಗೆ ಈ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಟ್ವೀಟ್ನಲ್ಲಿ ಹೇಳಿದ್ದಾರೆ.
ವಿಧಾನಪರಿಷತ್ ಉಪಸಭಾಪತಿ ಹಾಗೂ @JanataDal_S ಮುಖಂಡರಾದ ಎಸ್.ಎಲ್. ಧರ್ಮೇಗೌಡರು ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಕೇಳಿ ಆಘಾತವಾಗಿದೆ. ಸಜ್ಜನ, ಸನ್ನಡತೆಯ ಉಪಸಭಾಪತಿಗಳನ್ನು ಕಳೆದುಕೊಂಡದ್ದು ನಮ್ಮ ರಾಜ್ಯದ ನಷ್ಟ. ಅವರ ಕುಟುಂಬ ಹಾಗೂ ಬಂಧುಮಿತ್ರರಿಗೆ ಈ ನೋವು ಭರಿಸುವ ಶಕ್ತಿ ಭಗವಂತ ನೀಡಲಿ.
— H D Deve Gowda (@H_D_Devegowda) December 29, 2020