ಬೆಂಗಳೂರು: ನಗರಗಳ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡುವ ಉದ್ದೇಶದಿಂದ ಅಖಾಡಕ್ಕಿಳಿದಿರುವ ನಗರಾಭಿವೃದ್ಧಿ ಸಚಿವರಾದ ಬಿ.ಎ.ಬಸವರಾಜ ಬೆಳಗಾವಿಯಲ್ಲಿ ಸಂಚಲನ ಮೂಡಿಸಿದ್ದಾರೆ.
ಬೆಳಗಾವಿ ನಗರದಲ್ಲಿ ಮಹಾನಗರ ಪಾಲಿಕೆ, ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ನಡೆದಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.
ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಯಿಂದಾಗಿ ಹಲವೆಡೆ ಸಾರ್ವಜನಿಕರಿಂದ ದೂರುಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಜನಸ್ನೇಹಿಯಾಗಿ ಕಾಮಗಾರಿ ನಡೆಸುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.