ಬೆಂಗಳೂರು: ಪಂಚಾಯತ್ ಚುನಾವಣೆಯ ಬೆನ್ನಲೇ ರಾಜ್ಯದಲ್ಲಿ ಜೆಡಿಎಸ್ ಇದೀಗ ಪಕ್ಷ ಸಂಘಟನೆಗೆ ಸಿದ್ಧವಾಗಿದೆ. ಪಕ್ಷದ ಕೋರ್ ಕಮಿಟಿಯನ್ನು ಹೊಸದಾಗಿ ರಚಿಸಲು ಮುಂದಾಗಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ, ಅದ್ಕಕಾಗಿ ಈ ತಿಂಗಳ 18ರಂದು ಪಕ್ಷದ ಪ್ರಮುಖರ ಸಭೆಯನ್ನು ಕರೆದಿದ್ದಾರೆ.
ಸೂರ್ಯ ಪಥ ಬದಲಿಸಿ ಹೊಸ ಭರವಸೆಯ ಹೊಂಗಿರಣ ಮೂಡಿಸಿದಂತೆ ಈ ಮಕರ ಸಂಕ್ರಾಂತಿಯಂದು ಜೆಡಿಎಸ್ ಪಕ್ಷದ ಸಂಘಟನೆಯ ದೃಷ್ಟಿಯಿಂದ ಹೊಸತನದೊಂದಿಗೆ ಪಕ್ಷದ ಚಟುವಟಿಕೆಗಳನ್ನು ಕ್ರಿಯಾಶೀಲಗೊಳಿಸಲಾಗುತ್ತಿದೆ.
1/3— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 14, 2021
ಹೊಸ ಕೋರ್ ಕಮಿಟಿಯನ್ನು ಅಸ್ತಿತ್ವಕ್ಕೆ ತರಲಾಗುವುದು, ನಂತರ ಪಕ್ಷದ ರಾಜ್ಯ ಘಟಕದ ಪದಾಧಿಕಾರಿಗಳ ನೇಮಕ ಮಾಡಲಾಗುವುದು ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಇದರ ಮೊದಲ ಹೆಜ್ಜೆಯಾಗಿ ಈ ತಿಂಗಳ 18ರಂದು ಹೊಸದಾಗಿ ಕೋರ್ ಕಮಿಟಿ ರಚಿಸಲು ಪಕ್ಷದ ಪ್ರಮುಖರ ಸಭೆಯನ್ನು ಕರೆಯಲಾಗಿದೆ. ಅಂದಿನ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿ ಹೊಸ ಕೋರ್ ಕಮಿಟಿಯನ್ನು ಅಸ್ತಿತ್ವಕ್ಕೆ ತರಲಾಗುವುದು.
2/3— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 14, 2021
ನಂತರ ಪಕ್ಷದ ರಾಜ್ಯ ಘಟಕದ ಪದಾಧಿಕಾರಿಗಳ ನೇಮಕ, ಕಂದಾಯ ವಿಭಾಗವಾರು, ಜಿಲ್ಲೆ, ತಾಲೂಕು ಹಾಗೂ ಬೂತ್ ಮಟ್ಟದಲ್ಲಿ ಪಕ್ಷ ಬಲವರ್ಧನೆಗಾಗಿ ಪದಾಧಿಕಾರಿಗಳ ನೇಮಕಕ್ಕೆ ಚಾಲನೆ ನೀಡಲು ನಿರ್ಧರಿಸಲಾಗಿದೆ.
3/3— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 14, 2021