ಕೊವಿಡ್ ಮರಣ ಮೃದಂಗ ಹಿನ್ನೆಲೆ; ನಾಲ್ಕು‌ ನಗರಗಳಲ್ಲಿ ನೈಟ್ ಕರ್ಫ್ಯೂ

ದೆಹಲಿ: ಬೇಸಿಗೆ ಆರಂಭವಾಗುತ್ತಿದ್ದಂತೆಯೇ ದೇಶದಲ್ಲಿ ಕೊವಿಡ್ ಎರಡನೇ ಅಲೆ ಜನರನ್ನು ಆತಂಕಕ್ಕೀಡುಮಾಡಿದೆ. ಒಂದು ವರ್ಷದ ಅವಧಿಯಲ್ಲಿ ಕೊರೋನಾ ಸೃಷ್ಟಿಸಿದ ತಲ್ಲಣದಿಂದಾಗಿ ಜನ ಕಂಗಾಲಾಗಿದ್ದಾರೆ. ಇದೀಗ ಮತ್ತೆ ನಿತ್ಯವೂ ಸಾವಿರಾರು ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿದ್ದು ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಲಾಕ್‌ಡೌನ್ ಜಾರಿ ಮಾಡಲಾಗಿದೆ.

ಗುಜರಾತ್‌ನಲ್ಲೂ ಕೊರೋನಾ ಸೋಂಕು ಉಲ್ಬಣಗೊಂಡಿದೆ. ಕೋವಿಡ್ ಪ್ರಕರಣಗಳ ನಿಯಂತ್ರಣ ಸಂಬಂಧ ನಾಲ್ಕು ಪ್ರಮುಖ ನಗರಗಳಲ್ಲಿ ನೈಟ್ ಕರ್ಫ್ಯೂ ಹೇರಲಾಗಿದೆ.

ಅಹಮದಾಬಾದ್, ಸೂರತ್, ವಡೋದರಾ ಮತ್ತು ರಾಜ್‌ಕೋಟ್‌ನಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 6 ರವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಗುಜರಾತ್ ಸರ್ಕಾರ ತಿಳಿಸಿದೆ. ಮಾರ್ಚ್ 31ರವರೆಗೆ ನಿರ್ಬಂಧ ಜಾರಿಯಲ್ಲಿರುತ್ತವೆ ಸರ್ಕಾರ ಹೇಳಿಕೆದೆ.

Related posts