ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ಧಾಣಕ್ಕೆ ಮತ್ತಷ್ಟು ರಂಗು: ಹೊಸ ಟರ್ಮಿನಲ್ ಲೋಕಾರ್ಪಣೆ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇಂದು ಅಭೂತಪೂರ್ವ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಮಹತ್ವಾಕಾಂಕ್ಷೆಯ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣ ಮಾಡಿದರು.

‘ಪ್ರಗತಿಯ ಪ್ರತಿಮೆ’ ಎಂದೇ ಗುರುತಿಸಲಾಗಿರುವ ಕೆಂಪೇಗೌಡ ಅವರ ಪ್ರತಿಮೆ 108 ಅಡು ಎತ್ತರವಿದೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಭವ್ಯ ಪ್ರತಿಮೆಯನ್ನು ಅನಾವರಣಗೊಳಿಸಿದರು.

ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಬೆಂಗಳೂರಿನ ಕಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2ನೇ ಟರ್ಮಿನಲ್ ಉದ್ಘಾಟಿಸಿದರು.

ಈ ಸಮಯದಲ್ಲಿ ಸಿಎಂ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಸೇರಿ ಹಲವರು ಉಪಸ್ಥಿತಿರಿದ್ದರು.

Related posts