KSRTC ನೌಕರರಿಗೆ ಗುಡ್‌ನ್ಯೂಸ್.. ಚುನಾವಣೆ ಘೋಷಣೆಗೆ ಮುನ್ನವೇ ವೇತನ ಹೆಚ್ಚಳ ಆದೇಶ ಸಾಧ್ಯತೆ

ಬೆಂಗಳೂರು: ಸಾರಿಗೆ ಸಂಸ್ಥೆಗಳ ನೌಕರರ ವೇತನ ಹೆಚ್ಚಳಕ್ಕೆ ಸರ್ಕಾರ ಚಿಂತನೆ ನಡೆಸಿದ್ದು ಶೀಘ್ರದಲ್ಲೇ ಈ ಬಗ್ಗೆ ಆದೇಶ ಹೊರಬೀಳುವ ಸಾಧ್ಯತೆಗಳಿವೆ.

ಸದ್ಯದಲ್ಲೇ ವಿಧಾನಸಭಾ ಚುನಾವಣೆ ಘೋಷಣೆಯಾಗುವ ಸಾಧ್ಯತೆಗಳಿದ್ದು, ನೀತಿ ಸಂಹಿತೆ ಜಾರಿಯಾಗುವ ಮೊದಲೇ ಸಾರಿಗೆ ನೌಕರರ ವೇತನ ಹೆಚ್ಚಳ ಪ್ರಸ್ತಾವವನ್ನು ಇತ್ಯರ್ಥಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಈ ಕುರಿತಂತೆ ಸಾರಿಗೆ ಸಚಿವ ಶ್ರೀರಾಮುಲು ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆದಿದೆ. ಈ ಬಗ್ಗೆ ಸಿಎಂ ಬೊಮ್ಮಾಯಿ ಜತೆ ಚರ್ಚಿಸಿ ನಿಲುವು ಪ್ರಕಟಿಸಲು ಶ್ರೀರಾಮುಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಎಷ್ಟು ಹೆಚ್ಚಳವಾಗಬಹುದು..

ಸಾರಿಗೆ ಸಂಸ್ಥೆ ನೌಕರರು ತಮ್ಮ ವೇತನ ಹೆಚ್ಚಳ ಸಂಬಂಧ ಸುದೀರ್ಘ ಕಾಲದಿಂದ ಒತ್ತಾಯಿಸುತ್ತಲೇ ಬಂದಿದ್ದಾರೆ. ಶೇ. 25ರಷ್ಟು ಹೆಚ್ಚಳ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಪೈಕಿ ಶೇ. 10ರಷ್ಟು ವೇತನ ಹೆಚ್ಚಿಸುವ ಬಗ್ಗೆ ಸರ್ಕಾರ ಒಲವು ಹೊಂದಿದೆ ಸಾರಿಗೆ ಸಚಿವರ ಕಚೇರಿ ಮೂಲಗಳು ತಿಳಿಸಿವೆ.

Related posts