ಬಿಜೆಪಿ 65ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುವುದಿಲ್ಲ, 40 ಕ್ಷೇತ್ರಕ್ಕೆ ಕುಸಿದರೂ ಅಚ್ಚರಿ ಇಲ್ಲ..!?

ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮವಾಗಿದ್ದು, ರಾಷ್ಟ್ರೀಯ ನಾಯಕರ ತೀರ್ಮಾನದ ನಂತರ ಪಟ್ಟಿ ಪ್ರಕಟವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ‌

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಚರು, ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ, ‘ಬಹುತೇಕ ಶೇ.75 ರಷ್ಟು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮವಾಗಿದ್ದು, ಇಂದು ಉಳಿದ ಕ್ಷೇತ್ರಗಳ ಪಟ್ಟಿ ಅಂತಿಮಗೊಳಿಸಲಾಗುವುದು ಎಂದರು. ರಾಷ್ಟ್ರೀಯ ಮಟ್ಟದ ಸಭೆಯಲ್ಲಿ ಸ್ಪಷ್ಟ ನಿರ್ಧಾರವಾಗಲಿದೆ ಎಂದವರು ತಿಳಿಸಿದರು.

ನಮ್ಮ ಪಕ್ಷ ಅಧಿಕಾರಕ್ಕೆ ಬರುವ ಖಾತರಿ ಇದೆ. ಬಿಜೆಪಿ 65ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುವುದಿಲ್ಲ ಎಂಬ ಖಾತರಿಯೂ ಇದೆ ಎಂದ ಡಿಕೆಶಿ, ಬಿಜೆಪಿ ಪಕ್ಷದ ಆಂತರಿಕ ವಿಚಾರವಾಗಿ ನಾನು ಮಾತನಾಡಲ್ಲ. ಅವರು ಏನೇ ಮಾಡಿದರು 65ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುವುದಿಲ್ಲ. ಅವರು 40 ಕ್ಷೇತ್ರಕ್ಕೆ ಕುಸಿದರೂ ಅಚ್ಚರಿ ಇಲ್ಲ. ಜನ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನೀವು ಯಾರನ್ನೇ ಕೇಳಿದರೂ ಬಿಜೆಪಿಯಿಂದ ಅನುಕೂಲ ಆಗಿಲ್ಲ ಎಂದೇ ಹೇಳುತ್ತಿದ್ದಾರೆ’ ಎಂದರು.

ಸೋಮಣ್ಣ ಅವರು ಪಕ್ಷ ಸೇರುವ ಬಗ್ಗೆ ವಿರೋಧವಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆಶಿ, ‘ನಮ್ಮ ಬಳಿ ಅವರು ಮಾತನಾಡಿಲ್ಲ. ಅವರು ಪಕ್ಷ ಸೇರುವ ವಿಚಾರ ಚರ್ಚೆಯಾಗಿಲ್ಲ. ಇವೆಲ್ಲವೂ ಕೇವಲ ಊಹಾಪೋಹಗಳೇ ಹೊರತು ಯಾವುದೂ ನಿಜವಲ್ಲ’ ಎಂದು ಸ್ಪಷ್ಟಪಡಿಸಿದರು.

Related posts