ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 12ರಂದು ಕರ್ನಾಟಕಕ್ಕೆ ಮತ್ತೊಮ್ಮೆ ಭೇಟಿ ನೀಡಲಿದ್ದಾರೆ. ಮಹತ್ವಾಕಾಂಕ್ಷೆಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಉದ್ಘಾಟಿಸಲಿರುವ ಪ್ರಧಾನಿ ಮೋದಿ, ಸುಮಾರು 16,000 ಕೋಟಿ ರೂಪಾಯಿ ವೆಚ್ಚದ ವಿವಿಧ ಯೋಜನೆಗಳ ಉದ್ಘಾಟನೆ ಹಾಗೂ ಕಾಮಗಾರಿಗಳಿಗೆ ಮುನ್ನುಡಿ ಬರೆಯಲಿದ್ದಾರೆ. ಈ ಕುರಿತಂತೆ ಪ್ರಧಾನಿ ಮೋದಿಯವರು ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಇದೇ ವೇಳೆ, ಸುಮಾರು 41 ವರ್ಷಗಳ ನಂತರ ದೇಶದ ಪ್ರಧಾನಿಯೊಬ್ಬರು ಮಂಡ್ಯಕ್ಕೆ ಭೇಟಿ ನೀಡುತ್ತಿದ್ದು ಈ ಐತಿಹಾಸಿಕ ಕ್ಷಣವನ್ನು ಸಾಕ್ಷೀಕರಿಸುವಂತೆ ಮಂಡ್ಯದ ಸ್ವಾಭಿಮಾನಿ ಜನರಲ್ಲಿ ಸಂಸದೆ ಸುಮಲತಾ ಮನವಿ ಮಾಡಿದ್ದಾರೆ.
A great moment for my constituency #Mandya which will see a PM's visit after 41 years . Appealing to all my #Swabhimani #mandya people to be there early and make this event a showcase for our great district.#PMInMandya @narendramodi@PMOIndia @BJP4India @BJP4Karnataka https://t.co/ugk7WJwC8v
— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) March 11, 2023
ಇದೇ ವೇಳೆ, ಪ್ರಧಾನಿ ಮೋದಿ ಅವರು ಮಂಡ್ಯದಲ್ಲಿ ಪ್ರಮುಖ ರಸ್ತೆ ಯೋಜನೆಗಳ ಲೋಕಾರ್ಪಣೆ ಮಾಡಲಿದ್ದಾರೆ. ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಹುಬ್ಬಳ್ಳಿ-ಧಾರವಾಡದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಅವರು ಉದ್ಘಾಟಿಸಲಿದ್ದಾರೆ. ಅಲ್ಲೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮೋದಿಯವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.