ಚುನಾವಣೆಗೆ ತಯಾರಿ; ಅಕ್ರಮ ತಡೆಯಲು ಖಾಕಿ ಬಿಗಿ ಕ್ರಮ..

ಬೆಂಗಳೂರು: ವಿಧಾನಸಭೆ ಚುನಾವಣೆಗೆ ತಯಾರಿ ನಡೆದಿದ್ದು ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಚುನಾವಣೆಯು ರಾಜಕೀಯ ಪಕ್ಷಗಳ ಪಾಲಿಗೆ ಪ್ರತಿಷ್ಠೆಯ ಅಖಾಡವಾಗಿದ್ದು ಹಣದ ಹೊಳೆಯೇ ಹರಿಯುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ.

ಬಹುತೇಕ ಜಿಲ್ಲೆಗಳಲ್ಲಿ ಗಡಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ಹಾಕಲಾಗಿದೆ. ಈ ಚೆಕ್ ಪೋಸ್ಟ್‌ಗಳಲ್ಲಿ ಆಯಾ ಠಾಣಾ ಸರಹದ್ದಿನ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದ್ದು ವಾಹನಗಳನ್ನು ಪರಿಶೀಲಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಹಲವು ಕಡೆ ಅಕ್ರಮವಾಗಿ ಹಣ ಸಾಗಿಸುತ್ತಿರು ಪ್ರಕರಣಗಳು ಬೆಳಕಿಗೆ ಬರುತ್ತಿವೆ.

ಇದೇ ವೇಳೆ, ಕಲಬುರಗಿ ಜಿಲ್ಲೆಯ ಚೆಕ್ ಪೋಸ್ಟ್‌ಗಳಲ್ಲಿ ಬುಧವಾರ ಯಾವುದೇ ದಾಖಲೆ ಇಲ್ಲದೆ ಹಣ ಸಾಗಿಸುತ್ತಿದ್ದ ಪ್ರಜರಣವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಸುಮಾರು 1.9 ಕೋಟಿ ರೂಪಾಯಿಗಳನ್ನು ಪೊಲೀಸರು ವಶಪಡಿಸಿಕೊಂಡಿ ದ್ದಾರೆ

ಕಿಣ್ಣಿಸಡಕ್ ಚೆಕ್ ಪೋಸ್ಟ್ ಬಳಿ 1.4 ಕೋಟಿ ರೂಪಾಯಿ, ಜೇವರ್ಗಿ ಚೆಕ್ ಪೋಸ್ಟ್ ಬಳಿ 50 ಲಕ್ಷ ರೂಪಾಯಿ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ ವಿ.‌ಗುರುಕರ್ ತಿಳಿಸಿದ್ದಾರೆ.

Related posts