ಸಿದ್ದರಾಮಯ್ಯ, ಡಿಕೆಶಿಗೆ ಬಿಜೆಪಿ ಟಕ್ಕರ್.. ದಿಗ್ಗಜರಿಗೆ ಟಿಕೆಟ್ ಘೋಷಿಸಿದ ಕಮಲ ಹೈಕಮಾಂಡ್..

ದೆಹಲಿ: ರಾಜ್ಯ ವಿಧಾನಸಭಾ ಚುನಾವಣೆಗೆ ಅಖಾಡ ಸಜ್ಜಾಗಿದ್ದು ಬಿಜೆಪಿ ಕೂಡಾ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಹು ನಿರೀಕ್ಷಿತ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಹಲವು ಹಾಲಿ ಶಾಸಕರಿಗೆ ಕೊಕ್ ನೀಡಿ, 52 ಕಡೆ ಹೊಸಬರಿಗೆ ಟಿಕೆಟ್ ಘೋಷಿಸಲಾಗಿದೆ.‌.

ಮೊದಲ ಪಟ್ಟಿಯಲ್ಲಿ 189 ಹೆಸರುಗಳ ಘೋಷಣೆಯೇ ಈ ಬೆಳವಣಿಗೆಯ ಹೈಲೈಟ್.  ಅದರಲ್ಲೂ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ರೇಸ್‌ನಲ್ಲಿರುವ ಅಭ್ಯರ್ಥಿಗಳೆಂದೇ ಹೇಳಲಾಗುತ್ತಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ವಿರುದ್ದ ಬಿಜೆಪಿ ದಿಗ್ಗಜ ನಾಯಕರನ್ನೇ ಕಣಕ್ಕಿಳಿಸಲು ನಿರ್ಧರಿಸಿದೆ.

ಸಿದ್ದರಾಮಯ್ಯ ಸ್ಪರ್ಧಿಸಲಿರುವ ವರುಣಾ ಕ್ಷೇತ್ರದಲ್ಲಿ ಬಿಜೆಪಿಯಿಂದ ವಿ.ಸೋಮಣ್ಣ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ಪ್ರಕಟಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸ್ಪರ್ಧಿಸುವ ಕನಕಪುರದಲ್ಲಿ ಆರ್.ಅಶೋಕ್ ಅವರಿಗೆ ಬಿಜೆಪಿ ಪಕ್ಷವು ಟಿಕೆಟ್ ಘೋಷಿಸಿದೆ.

Related posts