ಪುತ್ತೂರಿನ ಜಿದ್ದಾಜಿದ್ದಿ ಹೋರಾಟದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರಿಗೆ ಜಯ. ಪಕ್ಷೇತರ ಅರುಣ್ ಕುಮಾರ್ ಪುತ್ತಿಲ ಅವರಿಗೆ ಸೋಲು. ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರಿಗೆ ಮೂರನೇ ಸ್ಥಾನ
ಮಂಗಳೂರು: ಹಿಂದೂತ್ವದ ಪ್ರಯೋಗ ಶಾಲೆ ಎಂದೇ ಗುರುತಾಗಿರುವ ದಕ್ಷಿಣಕನ್ನಡ ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಜಯಭೇರಿ ಭಾರಿಸಿದ್ದಾರೆ. ಬಿಜೆಪಿ ರಾಜ್ಯಅಧ್ಯಕ್ಷ ನಳಿನ್ ಕುಮಾರ್ ಅವರ ತವರಿನಲ್ಲೇ ಕಮಲಾ ಪಕ್ಷ ಹೀನಾಯವಾಗಿ ಸೋತಿರುವುದು ಈ ಚುನಾವಣೆಯ ಅಚ್ಚರಿ.
ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಆಶಾ ತಿಮ್ಮಪ್ಪ, ಕಾಂಗ್ರೆಸ್ ಪಕ್ಷದ ಅಶೋಕ್ ಕುಮಾರ್ ರೈ ಕಣದಲ್ಲಿದ್ದರು. ಬಿಜೆಪಿಯ ಟಿಕೆಟ್ ಆಕಾಂಕ್ಷಿಯಾಗಿದ್ದ ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಪಕ್ಷೇತರರಾಗಿ ಕಣಕ್ಕಿಳಿದಿದ್ದರು.
ಈ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಪಕ್ಷೇತರರ ನಡುವೆ ಸ್ಪರ್ಧೆ ನಡೆಯುತ್ತಿದೆ ಎಂದೇ ಬಿಜೆಪಿ ನಾಯಕರು ಹೇಳಿಕೊಳ್ಳುತ್ತಿದ್ದರು.
ಇದೆಲ್ಲದರ ನಡುವೆ ಹಿಂದೂ ಮತಗಳು ವಿಭಜನೆಯಾಗಿದ್ದರಿಂದಾಗಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರಿಗೆ ವರದಾನವಾಗಿತ್ತು.
ಅತ್ತ, ಅಥಣಿಯಲ್ಲಿ ಲಕ್ಷ್ಮಣ್ ಸಾವಧಿ ಕೂಡಾ ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಿದ್ದಾರೆ. ಇನ್ನೊಂದೆಡೆ ಮಂಗಳೂರು ದಕ್ಷಿಣದಲ್ಲಿ ಬಿಜೆಪಿಯನ್ನು ಕಟ್ಟಿಹಾಕುವ ಪ್ರಯತ್ನದಲ್ಲಿ ಕಾಂಗ್ರೆಸ್ ವಿಫಲವಾಗಿದ್ದು, ಅಲ್ಲಿ ಕಾಂಗ್ರೆಸ್ ಹುರಿಯಾಳು ಜೆ.ಆರ್.ಲೋಬೊ ಅವರು ಬಿಜೆಪಿಯ ವೇದವ್ಯಾಸ್ ಕಾಮತ್ ಮುಂದೆ ಸೋಲೊಪ್ಪಿಕೊಂಡಿದ್ದಾರೆ,