ದೆಹಲಿ: ಕರ್ನಾಟಕ ವಿಧಾನಮಂಡಲದಲ್ಲಿ ಮೇಲ್ಮನೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಬಿಜೆಪಿ ತೊತಲರೆದು ಕಾಂಗ್ರೆಸ್ ಸೇರಿರುವ ಜಗದೀಶ್ ಶೆಟ್ಟರ್ ಅವರನ್ನು ವಿಧಾನ ಪರಿಷತ್ಗೆ ಕಳುಹಿಸುವ ಬಗ್ಗೆ ಕೈ ಪಾಳಯದಲ್ಲಿ ಚಿಂತನೆ ನಡೆದಿದೆ.
ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಾಬುರಾವ್ ಚಿಂಚನಸೂರು, ಲಕ್ಷ್ಮಣ ಸವದಿ ಹಾಗೂ ಆರ್ ಶಂಕರ್ ರಾಜೀನಾಮೆಯಿಂದಾಗಿ ವಿಧಾನಪರಿಷತ್ನ ಮೂರು ಸ್ಥಾನಗಳು ತೆರವಾಗಿತ್ತು. ವಿಧಾನಸಭೆಯಿಂದ ಪರಿಷತ್ಗೆ ಆಯ್ಕೆಯಾಗುವ ಈ ಈ ಸ್ಥಾನಗಳಿಗೆ ಜೂ.30ರಂದು ಉಪಚುನಾವಣೆ ಘೋಷಣೆಯಾಗಿದೆ.
ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಲಿಂಗಾಯತ ಸಮುದಾಯಕ್ಕೆ ಪ್ರಾತಿನಿದ್ಯ ನೀಡುವ ಪ್ರಯತ್ನ ಕಾಂಗ್ರೆಸ್ ನಾಯಕರದ್ದು. ಈ ನಿಟ್ಟಿನಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಪರಿಷತ್ ಸದಸ್ಯರನ್ನಾಗಿಸುವ ಬಗ್ಗೆ ಹೈಕಮಾಂಡ್ ಚಿಂತನೆ ನಡೆಸಿದೆದೆ ಎನ್ನಲಾಗಿದೆ.
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲನುಭವಿಸಿದ್ದರು.