ಬೆಂಗಳೂರು: ಅನ್ನಭಾಗ್ಯ ಅಕ್ಕಿ ವಿತರಣೆ ವಿಚಾರದಲ್ಲಿ ರಾಜ್ಯ ಸರ್ಕಾರ ಕಠಿಣ ಹಾದಿಯಲ್ಲಿ ಸಾಗುವಂತಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ ಎಂದು ಕಾಂಗ್ರೆಸ್ ಆರೋಪಿಸುತ್ತಿದ್ದಾರೆ, ಪ್ರತಿಪಕ್ಷ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕಿಳಿದಿದೆ. ಈ ನಡುವೆ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಬೇಡಿಕೆ ಬಗ್ಗೆ ಗಮನಸೆಳೆದಿದ್ದಾರೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಸಿದ್ದರಾಮಯ್ಯ, ಸಂದರ್ಭದಲ್ಲಿ ಎಫ್.ಸಿ.ಐ ಅಕ್ಕಿ ನೀಡುವ ವಿಚಾರದಲ್ಲಿ ಒಪ್ಪಿಗೆ ಪತ್ರವನ್ನು ನೀಡಿ ಮರುದಿನವೇ ಅಕ್ಕಿ ವಿತರಣೆಯನ್ನು ರಾಜ್ಯಗಳಿಗೆ ಸ್ಥಗಿತಗೊಳಿಸಿಗಿರುವ ವಿಚಾರವನ್ನು ಗಮನಕ್ಕೆ ತರಲಾಗಿದೆ ಎಂದಿದ್ದಾರೆ.
ಅಕ್ಕಿ ವಿತರಣೆ ಬಗ್ಗೆ ರಾಜಕೀಯ ಅಥವಾ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ತಿಳಿಸಿದ್ದೇನೆ. ಅವರು ಸಂಬಂಧಪಟ್ಟ ಮಂತ್ರಿಗಳಿಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ನಿನ್ನೆ ಕೇಂದ್ರ ಗೃಹ ಸಚಿವ @AmitShah ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಎಫ್.ಸಿ.ಐ ಅಕ್ಕಿ ನೀಡುವ ವಿಚಾರದಲ್ಲಿ ಒಪ್ಪಿಗೆ ಪತ್ರವನ್ನು ನೀಡಿ ಮರುದಿನವೇ ಅಕ್ಕಿ ವಿತರಣೆಯನ್ನು ರಾಜ್ಯಗಳಿಗೆ ಸ್ಥಗಿತಗೊಳಿಸಿಗಿರುವ ವಿಚಾರವನ್ನು ಗಮನಕ್ಕೆ ತರಲಾಗಿದೆ.
ಅಕ್ಕಿ ವಿತರಣೆ ಬಗ್ಗೆ ರಾಜಕೀಯ ಅಥವಾ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು…— CM of Karnataka (@CMofKarnataka) June 22, 2023