ಬೆಂಗಳೂರು: ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ವ್ಯಂಗ್ಯವಾಡಿರುವ ಬಿಜೆಪಿ ನಾಯಕ, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ಇದೀಗ ಮತ್ತೊಂದು ಗ್ಯಾರೆಂಟಿ ಎಂದು ವ್ಯಂಗ್ಯವಾಡಿದ್ದಾರೆ.
ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಪರಿಸ್ಥಿತಿ ಬಗ್ಗೆ ಟೀಕಿಸಿರುವ ಬಸವರಾಜ್ ಬೊಮ್ಮಾಯಿ ಅವರು, ರಾಜ್ಯದಲ್ಲಿ ಕಾಗ್ರೇಸ್ ಪಕ್ಷ ಐದು ಗ್ಯಾರೆಂಟಿ ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದ್ದು, ಇದೀಗ ಬೆಲೆ ಏರಿಕೆ ಎಂಬ ಮತ್ತೊಂದು ಗ್ಯಾರೆಂಟಿಯನ್ನು ಜಾರಿಗೊಳಿಸಿದೆ ಎಂದು ಬಣ್ಣಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರೆಂಟಿ ಎಲ್ಲ ಬೆಲೆಗಳ ಏರಿಕೆಯ ಗ್ಯಾರೆಂಟಿ ಎಂಡಿದ್ದಾರೆ.
- ವಿದ್ಯುತ್ ದರ ಏರಿಕೆಯ ಶಾಕ್
- ಟೊಮೆಟೊ ಸಮೇತ ಎಲ್ಲ ತರಕಾರಿ ಬೆಲೆ ಏರಿಕೆ
- ನಂದಿನಿ ಹಾಲು, ಮೊಸರು, ಮಜ್ಜಿಗೆ ಬೆಲೆ ಏರಿಕೆ
- ಹೊಟೆಲ್ ಗಳಲ್ಲಿ ತಿಂಡಿಗಳ ಬೆಲೆ ಏರಿಕೆ
- ಬಜೆಟ್ ನಲ್ಲಿ ಅಬಕಾರಿ ತೆರಿಗೆ ಹೆಚ್ಚಳ
- ಮೋಟರ್ ವೆಹಿಕಲ್ ತೆರಿಗೆ ಹೆಚ್ಚಳ, ಸ್ಟ್ಯಾಂಪ್ ಡ್ಯೂಟಿ ಹೆಚ್ಚಳ ಮೂಲಕ ಬರುವಂತ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆ.
ಇದು ಕಾಂಗ್ರೆಸ್ ಸರ್ಕಾರದ ದುಬಾರಿ ದುನಿಯಾ ಸೃಷ್ಟಿ. ಜನ ಸಾಮಾನ್ಯರು ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಬಸವರಾಜ್ ಬೊಮ್ಮಾಯಿ ಅವರು ಬೊಟ್ಟು ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರೆಂಟಿ ಎಲ್ಲ ವಸ್ತುಗಳ ಬೆಲೆಗಳ ಏರಿಕೆಯ ಗ್ಯಾರೆಂಟಿ.
೧) ವಿದ್ಯುತ್ ದರ ಏರಿಕೆಯ ಶಾಕ್.
೨) ಟೊಮೆಟೊ ಸಮೇತ ಎಲ್ಲ ತರಕಾರಿ ಬೆಲೆ ಏರಿಕೆ.
೩) ನಂದಿನಿ ಹಾಲು, ಮೊಸರು, ಮಜ್ಜಿಗೆ ಬೆಲೆ ಏರಿಕೆ.
೪) ಹೊಟೆಲ್ ಗಳಲ್ಲಿ ತಿಂಡಿಗಳ ಬೆಲೆ ಏರಿಕೆ.
೫) ಬಜೆಟ್ ನಲ್ಲಿ ಅಬಕಾರಿ ತೆರಿಗೆ ಹೆಚ್ಚಳ.
೬) ಮೋಟರ್ ವೆಹಿಕಲ್ ತೆರಿಗೆ…— Basavaraj S Bommai (Modi Ka Parivar) (@BSBommai) August 1, 2023