ಬಂಟ್ವಾಳ: ಕಾಂಗ್ರೆಸ್ ಸಮಾವೇಶ ವೇಳೆ ಗಲಭೆ ಆರೋಪ; ಆರೋಪಿಗಳು ಖುಲಾಸೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆ ಕಲ್ಲಡ್ಕ ಬಳಿ ವರ್ಷಗಳ ಹಿಂದೆ ನಡೆದ ಕಾಂಗ್ರೆಸ್ ಸಮಾವೇಶ ಸಂದರ್ಭದಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಗಳನ್ನು ನ್ಯಾಯಾಲಯ ದೋಷಮುಕ್ತಗೊಳಿಸಿದೆ.

ಕಳೆದ 7 ವರ್ಷಗಳ ಹಿಂದೆ ಕಲ್ಲಡ್ಕದಲ್ಲಿ ನಡೆದ ಸಮಾವೇಶವೊಂದರ ಭಾಷಣದ ವೇಳೆ ಪೊಲೀಸ್‌ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಗಲಭೆ ಹಚ್ಚಿಸಲು ಯತ್ನಿಸಿದ್ದಾರೆ ಎಂಬ ಆರೋಪದಲ್ಲಿ ಪ್ರಕಾರಣ ಎದುರಿಸುತ್ತಿದ್ದ ಆರೋಪಿಗಳನ್ನು ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಖುಲಾಸೆಗೊಳಿಸಿದೆ

ಬಂಟ್ವಾಳ ವ್ಯಾಪ್ತಿಯ ಕಲ್ಲಡ್ಕದಲ್ಲಿ 2014ರ ಮಾರ್ಚ್‌ 8ರಂದು ಕಾಂಗ್ರೆಸ್‌ ಸಾಮರಸ್ಯ ಸಮಾವೇಶ ವೇಳೆ ನಾಯಕರ ಭಾಷಣ ವಿರೋಧಿಸಿ ಯುವಕರ ಗುಂಪು ಪ್ರತಿಭಟನೆಗೆ ಮುಂದಾಗಿತ್ತು. ಸುಮಾರು 30-40 ಮಂದಿ ಬಂದೋಬಸ್ತ್ ಕರ್ತವ್ಯದಲ್ಲಿದ್ದ ಪೊಲೀಸ್‌ ಅಧಿಕಾರಿಗಳು ಹಾಗೂ ಸಿಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆಗೆ ಯತ್ನಿಸಿತ್ತು. ಅಷ್ಟೇ ಅಲ್ಲ, ಸಾರ್ವಜನಿಕರಿಗೆ ಸೊತ್ತುಗಳಿಗೆ ಬೆಂಕಿ ಹಚ್ಚಿ ಜನರಿಗೆ ತೊಂದರೆ ನೀಡಿದ್ದರು ಎಂದು ಆರೋಪಿಸಲಾಗಿತ್ತು.

ಈ ಕುರಿತಂತೆ ಕೃಷ್ಣಪ್ಪ ಆಚಾರ್ಯ ಹಾಗೂ ಇತರ 28 ಮಂದಿ ವಿರುದ್ಧ ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು. ಪ್ರಕರಣ ಕುರಿತಂತೆ ವಿಚಾರಣೆ ನಡೆಸಿದ ನ್ಯಾಯಾಲಯ ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ನ್ಯಾಯಾಲಯವು ಆರೋಪಿಗಳ ಕೊರತೆ ಹಿನ್ನೆಲೆಯಲ್ಲಿ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಹಿರಿಯ ವಕೀಲ ಕೆ. ಶಂಭು ಶರ್ಮ ಅವರು ಆರೋಪಿಗಳ ಪರವಾಗಿ ವಾದಿಸಿದ್ದರು.

Related posts