ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಇಬ್ಬರು ಮೃತಪಟ್ಟು 36 ಮಂದಿ ಅಸ್ವಸ್ಥಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದೆ. ಚಿತ್ರದುರ್ಗ ಹೊರವಲಯದ ಕವಾಡಿಗರಹಟ್ಟಿಯಲ್ಲಿ ಈ ದಾರುಣ ಘಟನೆ ಸಂಭವಿಸಿದ್ದು, ತೀವ್ರ ವಾಂತಿ ಭೇದಿಯಿಂದ ಅಸ್ವಸ್ಥರಾದ ಕೆಲವರನ್ನು ಪ್ರಸ್ತುತ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ವಸ್ಥಗೊಂಡವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ. ಗಂಭೀರ ಸ್ಥಿತಿಯಲ್ಲಿರುವ ರೋಗಿಗಳನ್ನು ಪಕ್ಕದ ದಾವಣಗೆರೆ ನಗರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.
ಮೃತರನ್ನು ಕವಾಡಿಗರಹಟ್ಟಿ ನಿವಾಸಿಗಳಾದ 27 ವರ್ಷದ ಯುವಕ ರಘು ಮತ್ತು 23 ವರ್ಷದ ಮಂಜುಳಾ ಎಂದು ಗುರುತಿಸಲಾಗಿದೆ.