ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಙಧಿಯವರ ಲೋಕಸಭಾ ಸದಸ್ಯತ್ವ ಅನರ್ಹತೆ ಆದೇಶ ರದ್ದಾಗಿದೆ. ಕೇಂದ್ರ ಸರ್ಕಾರದ ಆದೇಶದ ಬೆನ್ನಲ್ಲೇ ಸ್ಫೀಕರ್ ಅವರು ರಾಹುಲ್ ಗಾಂಧಿ ಅನರ್ಹತೆ ಕುರಿತ ಹಿಂದಿನ ಆದೇಶಕ್ಕೆ ತಡೆಹಿಡಿದ್ದಾರೆ.
ಮೋದಿ ಉಪನಾಮ ಟೀಕೆ ಪ್ರಕರಣದಲ್ಲಿ ಸೂರತ್ ನ್ಯಾಯಾಲಯವು ಕಾಂಗ್ರೆಸ್ ಮುಖಂಡ ರಾಹುಲ್ಗಾಂಧಿ ಅವರಿಗೆ 2 ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿತ್ತು. ಈ ಹಿನ್ನೆಲೆಯಲ್ಲಿ ರಾಹುಲ್ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು. ಸೂರತ್ ನ್ಯಾಯಾಲಯದ ತೀರ್ಪಿಗೆ ಸುಪ್ರಿಂಕೋರ್ಟ್ ತಡೆಯಾಜ್ಞೆ ವಿಧಿಸಿದ ಹಿನ್ನೆಲೆಯಲ್ಲಿ, ರಾಹುಲ್ ಗಾಂಧಿಯವರ ಸಂಸತ್ ಸದಸ್ಯತ್ವವನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಪುನಃಸ್ಥಾಪಿಸಿದ್ದಾರೆ.