ರಾಮನಗರ: ರಾಮನಗರ ಸಮೀಪ ಲಕ್ಷ್ಮಿಪುರ ಗ್ರಾಮದ ಬಳಿ ಬುಧವಾರ ರಾತ್ರಿ ಭೀಕರ ಅಪಘಾತ ಸಂಭವಿಸಿದೆ. ರಸ್ತೆ ಬದಿ ನಿಂತಿದ್ದ ಮಕ್ಕಳ ಮೇಲೆ ಗೂಡ್ಸ್ ವಾಹನ ಹರಿದು ಸಂಭವಿಸಿದ ಈ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, 7 ಮಂದಿ ಗಾಯಗೊಂಡಿದ್ದಾರೆ.
ಟ್ಯೂಷನ್ ಮುಗಿಸಿ ಮನೆಗೆ ತೆರಳುತ್ತಿದ್ದ ಮಕ್ಕಳ ಮೇಲೆ ಗೂಡ್ಸ್ ವ್ಯಾನ್ ವಾಹನ ಹರಿದಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಗಾಯಾಳು ಮಕ್ಕಳನ್ನು ರಾಮನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ, ಗಂಭೀರ ಗಾಯಗೊಂಡಿರುವ ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇದೇ ವೇಳೆ, ಸ್ಥಳಕ್ಕೆ ರಾಮನಗರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಳಿಸಿ ತನಿಖೆ ಕೈಗೊಂಡಿದ್ದಾರೆ.