ಬೆಂಗಳೂರಿನಲ್ಲಿ ಒಕ್ಕಲಿಗ ಸಮಾಜ ವತಿಯಿಂದ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ

ಬೆಂಗಳೂರು: ಸರ್. ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ (ಟೌನ್‌ಹಾಲ್) ಜಾನಪದ ಸಂಭ್ರಮ, ರಾಜ್ಯಮಟ್ಟದ 2023ರ ಸಾಧಕರಿಗೆ ಮತ್ತು ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ರಾಜ್ಯ ಒಕ್ಕಲಿಗರ ಒಕ್ಕೂಟ ಟ್ರಸ್ಟ್‌ ವತಿಯಿಂದ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು.

ಸಮಾರ.ಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ॥ ನಿರ್ಮಲಾನಂದನಾಥ ಮಹಾ ಸ್ವಾಮೀಜಿ, ಕೂಡಲಸಂಗಮ ಪಂಚಮಸಾಲಿ ಜಗದ್ಗುರು ಮಹಾಪೀಠ ಧರ್ಮಕ್ಷೇತ್ರದ ಜಗದ್ಗುರು ಬಸವ ಜಯಮೃತ್ಯುಂಜಯ ಮಹಾಸ್ವಾಮೀಜಿ ಸಹಿತ ಗಣ್ಯರನೇಕರು ಭಾಗವಹಿಸಿದ್ದರು.

ಪಂಚಮಸಾಲಿ ಜಗದ್ಗುರು ಜಯಮೃತ್ಯುಂಜಯ ಮಹಾಸ್ವಾಮಿಯವರನ್ನು ಈ ಸಮಾರಂಭದಲ್ಲಿ ಗೌರವಿಸಿ ಸನ್ಮಾನಿಸಲಾಯಿತು.

ಐಆರ್‌ಎಸ್ ಅಧಿಕಾರಿ ಜಯರಾಮ್‌ ರಾಯಪುರ, ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಡಿ ಹನುಮಂತಯ್ಯ, ಉಪಾಧ್ಯಕ್ಷ ಎಲ್ ಶ್ರೀನಿವಾಸ್, ಕಿಮ್ಸ್ ಪ್ರಾದ್ಯಾಪಕ ಡಾ|| ಭಗವಾನ್ ಜಿ.ಪಿ, ರಾಜ್ಯ ಒಕ್ಕಲಿಗರ ಒಕ್ಕೂಟ ಟ್ರಸ್ಟ್ ಅಧ್ಯಕ್ಷ ಸಿ ವಿ ದೇವರಾಜ್ ಸಹಿತ ಪ್ರಮುಖರ ಉಪಸ್ಥಿತಿಯಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು.

Related posts