ಬೆಂಗಳೂರು: ಭಾರತೀಯ ಬಾಹ್ಯಾಕಾಶ ಕೇಂದ್ರದ ವಿಜ್ಞಾನಿಗಳ ಸಾಧನೆಗೆ ಜಗತ್ತಿನಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ‘ಚಂದ್ರಯಾನ-3’ ಯಶಸ್ವಿಯಾಗಿದ್ದು ಇದು ಇಡೀ ಮನುಕುಲಕ್ಕೆ ಮಹತ್ವಪೂರ್ಣವಾದದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಕೂಡಾ ಹೇಳಿದ್ದಾರೆ. ಇದೇ ವೇಳೆ, ಚಂದ್ರನ ನೆಲವನ್ನು ಭಾರ ಸ್ಪರ್ಶಿಸಿದ ದಿನವಾದ ಆಗಸ್ಟ್ 23ನ್ನು ಇನ್ನು ಮುಂದೆ ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಎಂದು ಆಚರಿಸಲಾಗುವುದು ಎಂದು ಮೋದಿ ಘೋಷಿಸಿದ್ದಾರೆ.
Interacting with our @isro scientists in Bengaluru. The success of Chandrayaan-3 mission is an extraordinary moment in the history of India's space programme. https://t.co/PHUY3DQuzb
— Narendra Modi (@narendramodi) August 26, 2023
ಇಸ್ರೋ ಕಮಾಂಡ್ ಸೆಂಟರ್ನಲ್ಲಿ ‘ಚಂದ್ರಯಾನ’ ಸಾಧಕರನ್ನು ಅಭಿನಂಧಿಸಿ ಮಾತನಾಡಿದ ಪ್ರಧಾನಿ, ಚಂದ್ರನ ಮೇಲೆ ಪ್ರಜ್ಞಾನ್ ಪರಾಕ್ರಮ ಕಂಡು ಖುಷಿಯಾಗಿದೆ ಎಂದು ಸಂತಸ ಹಂಚಿಕೊಂಡಿರುವ ಪ್ರಧಾನಿ, ಇಡೀ ವಿಶ್ವವೇ ಭಾರತದ ವಿಜ್ಞಾನ, ತಂತ್ರಜ್ಞಾನವನ್ನು ಒಪ್ಪಿಕೊಂಡಿದೆ ಎಂದರು. ಆಗಸ್ಟ್ 23ರ ಆ ದಿನ ನನ್ನ ಕಣ್ಣ ಮುಂದೆ ಪ್ರತಿ ಸೆಕೆಂಡ್ ಮತ್ತೆ ಮತ್ತೆ ತಿರುಗುತ್ತಿದೆ ಎಂದ ಮೋದಿ, ‘ನಿಮ್ಮ ಸಾಧನೆಯನ್ನು ಎಷ್ಟೇ ಕೊಂಡಾಡಿದರೂ ಅದು ಕಡಿಮೆಯೇ’ ಎಂದು ಹೇಳಿದರು.
ಇದೇ ವೇಳೆ, ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ ಪಾಯಿಂಟ್’ ಎಂದು ಕರೆಯೋಣ ಎಂದವರು ಅಭಿಪ್ರಾಯ ವ್ಯಕ್ತಪಡಿಸಿದರು. ಶಿವನಲ್ಲಿ ಮಾನವ ಶಕ್ತಿಯನ್ನು ರೂಪಿಸುವ ಶಕ್ತಿ ಇದೆ. ಚಂದ್ರನ ಮೇಲೂ ತಿರಂಗ ರಾರಾಜಿಸುತ್ತಿದೆ ಎಂದ ಮೋದಿ, ಚಂದ್ರಯಾನ-2 ಪತನ ಸ್ಥಳಕ್ಕೆ ತಿರಂಗ ಪಾಯಿಂಟ್ ಎಂದು ಬೊಟ್ಟು ಮಾಡಿದರಲ್ಲದೆ, ಮೇಕ್ ಇನ್ ಇಂಡಿಯಾ ಈಗ ಚಂದ್ರನವರೆಗೂ ತಲುಪಿದೆ ಎಂದರು.