ಕೋವಿಡ್ ಹಗರಣ ಬಗ್ಗೆ ತನಿಖೆ; ಡಾ.ಸುಧಾಕರ್ ಗಲಿಬಿಲಿ..!

ಬೆಂಗಳೂರು: ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣ ಬಗ್ಗೆ ಸರ್ಕಾರ ತನಿಖೆ ನಡೆಸಲು ಕೊನೆಗೂ ಮುಂದಾಗಿದೆ. ಆದರೆ ಅಷ್ಟರಲ್ಲೇ ಬಿಜೆಪಿ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದ ಡಾ.ಸುಧಾಕರ್ ಗಲಿಬಿಲಿಗೊಂಡಂತಿದೆ. ಈ ಬಗ್ಗೆ ಟೀಕಾಸ್ತ್ರ ಪ್ರಯೋಗಿಸಿರುವ ಕಾಂಗ್ರೆಸ್, ರಾಜ್ಯ ಸರ್ಕಾರದ ತನಿಖೆಯ ನಿರ್ಧಾರ ಧ್ವೇಷದ ಕ್ರಮ ಹೇಗಾಗುತ್ತದೆ ಎಂದು ಪ್ರಶ್ನಿಸಿದೆ.

ಕೋವಿಡ್ ಹಗರಣವನ್ನು ತನಿಖೆಗೆ ವಹಿಸಿದರೆ ಸುಧಾಕರ್ ಅವರು ಮೈಮೇಲೆ ಚೇಳು ಬಿದ್ದಂತೆ ಹೌಹಾರುತ್ತಿರುವುದೇಕೆ? ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ ಎಂದರೆ ಕುಂಬಳಕಾಯಿಯ ಕಳ್ಳರು ಇವರೇ ಎಂದರ್ಥವಲ್ಲವೇ ಎಂದು ಕಾಂಗ್ರೆಸ್ ಪಕ್ಷ ಟ್ವಿಟರ್‌ ಮೂಲಕ ಕೆಣಕಿದೆ.

ಹಗರಣವೊಂದನ್ನು ತನಿಖೆಗೆ ವಹಿಸುವುದು ದ್ವೇಷ ರಾಜಕಾರಣ ಹೇಗಾಗುತ್ತದೆ ಸುಧಾಕರ್ ಅವರೇ? ಎಂದು ಪ್ರಶ್ನಿಸಿರುವ ಕಾಂಗ್ರೆಸ್, ಹಗರಣದ ಕಡೆ ನಾವು ಬೆರಳು ತೋರಿಸಿದಾಗ ಸಾಕ್ಷಿ ಎಲ್ಲಿದೆ, ತನಿಖೆಯಾಗಲಿ ಎನ್ನುವ ಬಿಜೆಪಿಗರು ತನಿಖೆಗೆ ವಹಿಸಿದಾಕ್ಷಣ ದ್ವೇಷ ರಾಜಕಾರಣ ಎಂದು ಚೀರಾಡುತ್ತಾರೆ. ಬಿಜೆಪಿಗರು ಸತ್ಯ ಹರೀಶ್ಚಂದ್ರನ ಮರಿ ಮರಿ ಮೊಮ್ಮಕ್ಕಳಾಗಿದ್ದರೆ ಆತಂಕಪಡುವುದೇಕೆ? ಎಂದು ಪ್ರಶ್ನಿಸಿದೆ.

Related posts