ಭೋಪಾಲ್: ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಸಂಕಟದ ಪರಿಸ್ಥಿತಿ ಎದುರಾಗಿದೆ. ಹಾಲಿ ಶಾಸಕರೂ ಸೇರಿದಂತೆ 9 ಮಂದಿ ಪ್ರಭಾವಿ ನಾಯಕರು ಆಪರೇಷನ್ ಹಸ್ತಕ್ಕೆ ಗುರಿಯಾಗಿದ್ದಾರೆ.
ಒಂಬತ್ತು ನಾಯಕರು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಭೋಪಾಲ್‌ನಲ್ಲಿರುವ ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ಹಿರಿಯ ನಾಯಕರಾದ ಕಮಲ್ ನಾಥ್ ಮತ್ತು ರಣದೀಪ್ ಸುರ್ಜೆವಾಲಾ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ವರ್ಷಾಂತ್ಯದಲ್ಲಿ ಮಧ್ಯಪ್ರದೇಶ ವಿಧಾನಸಭಾ ಚುನಾವಣೆ ನಡೆಯಲಿದ್ದು ಈ ಸಮರಕ್ಕೆ ರಾಜಕೀಯ ಪಕ್ಷಗಳು ತಯಾರಿಯಲ್ಲಿರುವಾಗಲೇ ಈ ಪಕ್ಷಾಂತರ ಪರ್ವ ಬಿಜೆಪಿಗೆ ಸವಾಲೆಂಬಂತಾಗಿದೆ.