ಬೆಂಗಳೂರು: ಏಷ್ಯಾ ಫೆಸಿಫಿಕ್ ಮಾನವ ಸಂಪನ್ಮೂಲ ಕಾಂಗ್ರೆಸ್ (Asia Pacific HRM Congress) ರವರು ಸ್ಥಾಪಿಸಿರುವ ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮ ಅನುಷ್ಠಾನಗೊಳಿಸಿದ ಸಂಸ್ಥೆಯ ಪ್ರಶಸ್ತಿಯು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಲಭಿಸಿದೆ.
ಬೆಂಗಳೂರಿನ ತಾಜ್ ಹೋಟೆಲ್ ನಲ್ಲಿ 14.09.2023ರಂದು ನಡೆದ ಪ್ರಶಸ್ತಿ ಸಮಾರಂಭದಲ್ಲಿ ಓಡಿಶಾ ಸರ್ಕಾರದ ಸಾರ್ವಜನಿಕ ಉದ್ದಿಮೆಗಳ ಇಲಾಖೆಯ ನಿರ್ದೇಶಕರು ಹಾಗೂ ಹೆಚ್ಚುವರಿ ಕಾರ್ಯದರ್ಶಿಗಳಾದ ಡಾ. ಪಾರ್ಥ ಸಾರಧಿ ಮಿಶ್ರ ಅವರು ಏಷ್ಯಾದ ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳನ್ನು ಅನುಷ್ಠಾನಗೊಳಿಸಿದ ಉನ್ನತ ಸಂಸ್ಥೆ ಯ ಪ್ರಶಸ್ತಿಯನ್ನು ಮುಖ್ಯ ಭದ್ರತಾ ಮತ್ತು ಜಾಗೃತಾಧಿಕಾರಿಜಿ.ಎನ್. ಲಿಂಗರಾಜು, ಉಗ್ರಾಣ ಮತ್ತು ಖರೀದಿ ನಿಯಂತ್ರಣಾಧಿಕಾರಿ ಶ್ರೀ ಶಿವನಂದ ಕವಳಿಕಾಯಿ ಮತ್ತು ಮುಖ್ಯ ಸಂಚಾರ ವ್ಯವಸ್ಥಾಪಕರು (ವಾಣಿಜ್ಯ) ಎಸ್. ರಾಜೇಶ್ ರವರಿಗೆ ನಿಗಮದ ಪರವಾಗಿ ಪ್ರಧಾನ ಮಾಡಿದರು.