ಕಾವೇರಿ ಸಂಕಷ್ಟ: ಎರಡೂ ರಾಜ್ಯದವರನ್ನು ಕರೆದು ಅಹವಾಲು ಕೇಳಲು ಪ್ರಧಾನಿಗೆ ಮನವಿ

ಬೆಂಗಳೂರು: ತಮಿಳುನಾಡಿಗೆ ನೀರು ಬಿಡಬೇಕು ಎನ್ನುವ CWMA ಆದೇಶಕ್ಕೆ ನಾವು ಸುಪ್ರೀಂಕೋರ್ಟ್ ಮುಂದೆ ತಡೆಯಾಜ್ಞೆಗೆ ಮನವಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ..

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಎದುರಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಲು ತೆಗೆದುಕೊಳ್ಳಬೇಕಾಗಿರುವ ಕ್ರಮಗಳ ಕುರಿತು ಸಿಎಂ ಸಿದ್ದರಾಮಯ್ಯ ಉಪಸ್ಥಿತಿಯಲ್ಲಿ ದೆಹಲಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ಸರ್ವ ಪಕ್ಷ ಸಂಸದರ ಸಭೆ ನಡೆಯಿತು. ಕೇಂದ್ರ ಸಚಿವರು ಮತ್ತು ಲೋಕಸಭೆ, ರಾಜ್ಯಸಭೆ ಸದಸ್ಯರು ಭಾಗವಿಸಿದ್ದ ಈ ಸಭೆಯಲ್ಲಿ ಕಾವೇರಿ ಸಮಸ್ಯೆ ಬಗ್ಗೆ ಗಹನ ಚರ್ಚೆ ನಡೆಯಿತು.

ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂಕಷ್ಟ ಸೂತ್ರ ಇಲ್ಲದಿರುವುದು ಸಮಸ್ಯೆ, ಸಂಕಷ್ಟ ಹೆಚ್ಚಲು ಕಾರಣವಾಗಿದೆ ಎಂದರು. ಕಾವೇರಿ ವಿಚಾರದಲ್ಲಿ ಎರಡೂ ರಾಜ್ಯದವರನ್ನು ಕರೆದು ಅಹವಾಲು ಕೇಳುವ ಅಧಿಕಾರ ವ್ಯಾಪ್ತಿ ಪ್ತಧಾನಿಯವರಿಗೆ ಇದೆ. ಹೀಗಾಗಿ ನಾವು ಪ್ರಧಾನಿ ಅವರ ಮಧ್ಯಪ್ರವೇಶಕ್ಕೆ ಮನವಿ ಮಾಡಿದ್ದೇವೆ ಎಂದವರು ತಿಳಿಸಿದರು.

ಸಭೆಯ  ಹೈಲೈಟ್ಸ್ ಹೀಗಿದೆ: 

  • ಸಚಿವೆ ನಿರ್ಮಲಾ ಸೀತಾರಾಮನ್ ಹೊರತುಪಡಿಸಿ ರಾಜ್ಯದಿಂದ ಆಯ್ಕೆಯಾದ ಎಲ್ಲಾ ಸಂಸದರು, ಕೇಂದ್ರ ಸಚಿವರು ಸಭೆಯಲ್ಲಿ ಹಾಜರಿದ್ದರು.

  • ಈಗಾಗಲೇ ರಾಜ್ಯದಲ್ಲಿ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಗುರುತಿಸಿದ್ದೇವೆ ಎಂದ ಸಿಎಂ.

  • 123 ವರ್ಷಗಳಲ್ಲೇ ಆಗಸ್ಟ್ ತಿಂಗಳಿನಲ್ಲಿ ಅತಿ ಕಡಿಮೆ ಮಳೆ ದಾಖಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದ ಸಿದ್ದರಾಮಯ್ಯ.

  • ವಾಡಿಕೆಗಿಂತ ಅತಿ ಕಡಿಮೆ ಮಳೆ ಸಂಕಷ್ಟ ಹೆಚ್ಚಲು ಕಾರಣ ಎಂದ ಮುಖ್ಯಮಂತ್ರಿ.

  • 177.2 TMC ನೀರು ಸಾಮಾನ್ಯ ವರ್ಷದಲ್ಲಿ, ಮಳೆ ಚೆನ್ನಾಗಿದ್ದಾಗ ನೀರು ಬಿಡಬೇಕು ಎಂದು ಹೇಳಿದೆ. ಆದರೆ ಇಂಥಾ ಸಂಕಷ್ಟದ ಸಂದರ್ಭದಲ್ಲಿ ಎಷ್ಡು ನೀರು ಬಿಡಬೇಕು ಎನ್ನುವ ಸೂತ್ರ ಇಲ್ಲದಿರುವುದು ಸಮಸ್ಯೆ.

  • ನಮಗೆ ಕುಡಿಯುವ ನೀರು, ಬೆಳೆ ರಕ್ಷಣೆ, ಕೈಗಾರಿಕೆಗೂ ನೀರಿಲ್ಲ. ಹೀಗಾಗಿ ನಾವು ಬಹಳ ಕಷ್ಟದಲ್ಲಿದ್ದೇವೆ ಎಂದ ಸಿದ್ದರಾಮಯ್ಯ.

  • CWMA, CWRA ಮುಂದೆ ಸಮರ್ಥವಾಗಿ ನಮ್ಮ ವಾಸ್ತವ ಪರಿಸ್ಥಿತಿಯನ್ನು ಮಂಡನೆ.

  • ತಮಿಳುನಾಡು ವಾದ ವಿರೋಧಿಸಿ ಸುಪ್ರೀಂಕೋರ್ಟ್ ನಲ್ಲಿ ನಮ್ಮ ತಕರಾರು ಮಂಡಿಸಿದ್ದೇವೆ. ಒಟ್ಟು ಮೂರು ಬಾರಿ ಸರ್ವ ಪಕ್ಷ ಸಭೆ ನಡೆಸಿದ್ದೇವೆ. 5 ಸಾವಿರ ಕ್ಯೂಸೆಕ್ಸ್ ನೀರು ಬಿಡಲಾಗುತ್ತಿಲ್ಲ ಎಂದು CWMA ಮುಂದೆಯೂ ಮನವಿ ಸಲ್ಲಿಸಲಿದ್ದೇವೆ ಎಂದು ಸಿಎಂ ಮಾಹಿತಿ.

  • 10 ಸಾವಿರ ಕ್ಯೂಸೆಕ್ಸ್ ನೀರು ಬಿಡಬೇಕು ಎನ್ನುವ ಆದೇಶ ಬಂದಾಗ, 5 ಸಾವಿರ ಕ್ಯೂಸೆಕ್ಸ್ ನೀರು ಬಿಡಬೇಕು ಅಂದಾಗೆಲ್ಲಾ ಒಟ್ಟು ಮೂರು ಬಾರಿ ನಾವು ಸರ್ವ ಪಕ್ಷ ಸಭೆ ಕರೆದಿದ್ದೇವೆ ಎಂದ ಸಿದ್ದರಾಮಯ್ಯ.

Related posts