ದೆಹಲಿ: ದೇಶದಲ್ಲಿ 2,000 ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲಾಗಿದ್ದು ಆ ನೋಟುಗಳ ವಿನಿಮಯ ಮಾಡಿಕೊಳ್ಳುವ ಅವಧಿಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ. ಸೆಪ್ಟೆಂಬರ್ 30ರವರೆಗೆ ನೀಡಲಾಗಿದ್ದ ಕಾಲಾವಕಾಶವನ್ನು ಅಕ್ಟೋಬರ್ 7ವರೆಗೆ ವಿಸ್ತರಿಸಲಾಗಿದೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ರಿವರ್ಸ್ ಬ್ಯಾಂಕ್, 2,000 ರೂ ಮುಖಬೆಲೆಯ ನೋಟುಗಳನ್ನು ಮರಳಿಸಲು ಮತ್ತು ವಿನಿಮಯ ಮಾಡಿಕೊಳ್ಳಲು ಅಕ್ಟೋಬರ್ 7ವರೆಗೆ ಅವಕಾಶ ನೀಡಲಾಗುವುದು ಎಂದು ಹೇಳಿದೆ. 2,000 ರೂ. ಮುಖಬೆಲೆಯ ನೋಟುಗಳನ್ನು ಬ್ಯಾಂಕ್ ಠೇವಣಿ ಅಥವಾ ವಿನಿಮಯ ಮಾಡಿಕೊಳ್ಳಲು ಅವಕಾಶ ಇದೆ ಎಂದು ರಿವರ್ಸ್ ಬ್ಯಾಂಕ್ ಹೇಳಿದೆ.