ಬೆಂಗಳೂರು: ಕಾವೇರಿ ನೀರಿನ ಅವೈಜ್ಞಾನಿಕ ತೀರ್ಪಿನ ವಿರುದ್ಧ ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್ ಮಾಡಿದ್ದು 29ರಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ರವರನ್ನು ಭೇಟಿ ಮಾಡಿ ಚರ್ಚೆ ಮಾಡಿ ಕೂಡಲೇ ತಮಿಳುನಾಡಿಗೆ ಹರಿಸುತ್ತಿರುವ ನೀರು ನಿಲ್ಲಿಸುವಂತೆ ,ವಿಶೇಷ ವಿಧಾನ ಮಂಡಲದ ಅಧಿವೇಶನ ಕರೆದು ಸಂಕಷ್ಟ ಸೂತ್ರ ಜಾರಿ ಆಗುವ ತನಕ ನೀರು ಬಿಡುವುದಿಲ್ಲ ಎನ್ನುವ ನಿರ್ಣಯ ಕೈಗೊಳ್ಳಬೇಕೆಂದು ಹಾಗೂ ಕಾವೇರಿ ನೀರು ನಿರ್ವಹಣಾ ಮಂಡಳಿ ಕುರುಡು ಆದೇಶ ಆವೈಜ್ಞಾನಿಕ ತೀರ್ಪುಗಳನ್ನ ನೀಡುತ್ತಿರುವ ಕಾರಣ ಈ ಮಂಡಳಿಯನ್ನು ರದ್ದು ಮಾಡಿ ಸ್ವತಂತ್ರ ಕಾರ್ಯನಿರ್ವಹಣೆ ಮಾಡುವ ಚುನಾವಣಾ ಆಯೋಗದ ರೀತಿ ಕಾರ್ಯನಿರ್ವಹಿಸುವ ನೀರು ನಿರ್ವಾಹಣ ಪ್ರಾಧಿಕಾರ ರಚಿಸುವಂತೆ ಸರ್ವೋಚ್ಚ ನ್ಯಾಯಾಲಯವನ್ನು ಕೋರಿಕೊಳ್ಳಲು ಒತ್ತಾಯಿಸಲಾಗುವುದು ಎಂದು ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಮುಖಂಡ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.
ಮಳೆ ಹೆಚ್ಚು ಬಂದಾಗ ನೀರು ಸಂಗ್ರಹಿಸಿಕೊಳ್ಳಲು ಮೇಕೆದಾಟು ನಿರ್ಮಾಣ ತಕ್ಷಣ ಕಾರ್ಯಾ ಆರಂಭ ಮಾಡಲು ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಲಾಗಿದೆ ಈ ಬಗ್ಗೆ ಯಾವುದೇ ಸ್ಪಷ್ಟ ನಿರ್ಧಾರ ಬಂದಿಲ್ಲವಾದ ಕಾರಣ ಅಕ್ಟೋಬರ್ 2 ರಂದು ಗಾಂಧಿ ಜಯಂತಿಯ ದಿನ ಮಹಾತ್ಮ ಗಾಂಧಿಯವರನ್ನು ನೆನೆದು ಮೌನ ಪ್ರತಿಭಟನೆಯ ಮೂಲಕ ಸರ್ಕಾರಕ್ಕೆ ಎಚ್ಚರಿಸುವ ಪ್ರತಿಭಟನಾ ಮೌನ ಧರಣಿ ಚಳುವಳಿ ಹಮ್ಮಿಕೊಳ್ಳಲಾಗಿದೆ ಕರ್ನಾಟಕ ಜಲ ಸಂರಕ್ಷಣಾ ಸಮಿತಿಯ ಎಲ್ಲಾ ಸಂಘ ಸಂಸ್ಥೆಗಳು ಪದಾಧಿಕಾರಿಗಳು ಬೆಂಗಳೂರಿನ ಸ್ವತಂತ್ರ ಉದ್ಯಾನವನ ಬಳಿ ಬಳಿಗೆ 10 ಗಂಟೆಗೆ ಬರಬೇಕೆಂದು ಮನವಿ ಮಾಡುತ್ತೇವೆ ಎಂದವರು ತಿಳಿಸಿದ್ದಾರೆ.