ಈದ್ ಮಿಲಾದ್ ಮೆರವಣಿಗೆ ಕಲ್ಲು ತೂರಾಟ; 60 ಮಂದಿ ಸೆರೆ

ಶಿವಮೊಗ್ಗ: ಮಲೆನಾಡ ಸೆರಗು ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 24 ಪ್ರಕರಣಗಳು ದಾಖಲಾಗಿದ್ದು, 60 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ರಾಗಿ ಗುಡ್ಡ ಪ್ರದೇಶದಲ್ಲಿ ಭಾನುವಾರ ಈದ್ ಮಿಲಾದ್ ಮೆರವಣಿಗೆ ವೇಳೆ ಉದ್ರಿಕ್ತ ಗುಂಪು ಕಲ್ಲು ತೂರಾಟ ನಡೆಸಿತ್ತು. ಈ ಘಟನೆ ನಂತರ ಆ ಪ್ರದೇಶ ಉದ್ವಿಗ್ನಗೊಂಡಿತ್ತು. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.

ಸ್ಥಳದಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಪೊಲೀಸರು ರಾಗಿ ಗುಡ್ಡ ಘಟನೆಗೆ ಸಂಬಂಧಿಸಿದಂತೆ 24 ಎಫ್‌ಐಆರ್‌ ದಾಖಲಿಸಿದ್ದಾರೆ. ಹಿಂಸಾಚಾರ ಸಂಬಂಧ 60 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Related posts