ಶಿವಮೊಗ್ಗ: ಕರಾವಳಿ ಮಲೆನಾಡಿನ ಹಿಂದೂ ಕಾರ್ಯಕರ್ತರಿಗೆ ಸ್ಫೂರ್ತಿಯ ನಾಯಕನೆನಿಸಿರುವ ಅರುಣ್ಕುಮಾರ್ ಪುತ್ತಿಲ ವಿರುದ್ಧ ಪೊಲೀಸರೂ ಮುನಿಸಿಕೊಂಡಿದ್ದಾರೆ.
ಹಿಂದೂ ಮುಖಂಡ ಅರುಣ್ಕುಮಾರ್ ಪುತ್ತಿಲ ವಿರುದ್ಧ ಶಿವಮೊಗ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಶಿವಮೊಗ್ಗದ ರಾಗಿಗುಡ್ಡಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅರುಣ್ಕುಮಾರ್ ಪುತ್ತಿಲ ಅವರು ನಿಷೇಧಾಜ್ಞೆ ಉಲ್ಲಂಘಿಸಿದ್ದಾರೆಂದು ಆರೋಪಿಸಲಾಗಿದೆ. ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪವನ್ನೂ ಪೊಲೀಸರು ದಾಖಲಿಸಿಕೊಂಡಿದ್ದಾರೆ.
ಈ ನಡುವೆ, ರಾಗಿಗುಡ್ಡ ಪ್ರದೇಶಕ್ಕೆ ಬಿಜೆಪಿ ಸಹಿತ ವಿವಿಧ ಪಕ್ಷಗಳ ಅನೇಕ ನಾಯಕರು ಭೇಟಿ ನೀಡಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸದ ಪೊಲೀಸರು ಹಿಂದೂ ಮುಖಂಡ ಅರುಣ್ಕುಮಾರ್ ಪುತ್ತಿಲ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಕಾರ್ಯಕರ್ತರು ಆಕ್ಷೇಪಿಸಿದ್ದಾರೆ.