ಅಹಮದಾಬಾದ್: ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಕಿಸ್ತಾನ ವಿರುದ್ದದ ಪಂದ್ಯದಲ್ಲಿ ಭಾರತ 7 ವಿಕೆಟ್ಗಳಿಂದ ಜಯಗಳಿಸಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ ಪಂದ್ಯದಲ್ಲಿ ಭಾರತ 7 ವಿಕೆಟ್ಗಳಿಂದ ಪಾಕಿಸ್ತಾನವನ್ನು ಮಣಿಸಿದೆ. ಈ ಮೂಲಕ 2023ರ ವಿಶ್ವಕಪ್ನಲ್ಲಿ ಭಾರತ ಸತತ 8ನೇ ಗೆಲುವು ಸಾಧಿಸಿದೆ.
ಶನಿವಾರದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ಭಾರತದ ಬೌಲರ್’ಗಾಳ ದಾಳಿಗೆ ತತ್ತರಿಸಿದರು. ಪಾಕಿಸ್ತಾನ ತಂಡ 42.5 ಓವರ್ಗಳಲ್ಲ ಕೇವಲ 191 ರನ್ ಗಳಿಸುವಲ್ಲಿ ಶಕ್ತವಾಯಿತು. ಇದಕ್ಕೆ ಉತ್ತರವಾಗಿ ಭಾರತವು 30.3 ಓವರ್ ನಲ್ಲಿ 3 ವಿಕೆಟ್ ಕಳೆದುಕೊಂಡು 192 ರನ್ ಗಳಿಸಿ ಪಂದ್ಯವನ್ನು ನಿರಾಯಾಸವಾಗಿ ಗೆದ್ದುಕೊಂಡಿತು.
ಭಾರತದ ಪರ ರೋಹಿತ್ ಶರ್ಮಾ 86, ಶುಭ್ಮನ್ ಗಿಲ್ 16, ವಿರಾಟ್ ಕೊಹ್ಲಿ 16 ರನ್ ಗಳಿಸಿದ್ದಾರೆ. ಶ್ರೇಯಸ್ ಅಯ್ಯರ್ ಅಜೇಯ 53 ಮತ್ತು ಕೆಎಲ್ ರಾಹುಲ್ ಅಜೇಯ 19 ರನ್ ಪೇರಿಸಿ ಭಾರತ ತಂಡವನ್ನು ಗೆಲುವಿನ ದಡ ಸೇರಿಸಿದರು. ಪಾಕಿಸ್ತಾನ ವಿರುದ್ಧ ಜಯಗಳಿಸಿದ ಭಾರತ ತಂಡವನ್ನು ಬಿಸಿಸಿಐ ಮುಖ್ಯಸ್ಥ ಜೈ ಷಾ ಅಭಿನಂಧಿಸಿದ್ದಾರೆ.
Congratulations to Team India on their remarkable performance in the #CWC2023! With three consecutive wins, they have set the tournament on fire, demonstrating their prowess on the field. Our bowlers displayed clinical precision by limiting Pakistan to just 191 runs on what… pic.twitter.com/wRloJRorEj
— Jay Shah (@JayShah) October 14, 2023