ಬೆಂಗಳೂರು: ವಿಧಾನಸೌಧ ಸಹಿತ ಸರ್ಕಾರಿ ಕಟ್ಟಡಗಳಲ್ಲಿ ಅರಿಶಿನ-ಕುಂಕುಮ ಬಳಕೆ ಕುರಿತಂತೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ರಾಸಾಯನಿಕಯುಕ್ತ ಅರಿಶಿನ-ಕುಂಕುಮ ಮತ್ತು ಇತರೆ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್ಗಳಲ್ಲಿ ಬಳಸಬಾರದು ಎಂದು ಹೊರಡಿಸಿರುವ ಆದೇಶ ಇದು ಹೊಸತೇನಲ್ಲ ಎಂದಿದ್ದಾರೆ.
ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ ಅಥವಾ ಬಹುಕಾಲ ಉಳಿಯುವುದರಿಂದ ಇದರಿಂದಾಗುವ ಹಾನಿ ತಪ್ಪಿಸಲು ಹಿಂದಿನ ಸರ್ಕಾರಗಳು ಪಾಲಿಸಿಕೊಂಡು ಬಂದಿದ್ದ ಸಂಪ್ರದಾಯವನ್ನೇ ನಾವು ಪಾಲಿಸಿದ್ದೇವೆ’ ಎಂದು ಸ್ಪಷ್ಟಪಡಿಸಿರುವ ಅವರು, ಈ ಬಗ್ಗೆ ಸರ್ಕಾರದ ಜನರಲ್ಲಿ ಮನವಿ ಮಾಡಿದ್ದಾರೆ.
ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ರಾಸಾಯನಿಕಯುಕ್ತ ಅರಿಶಿನ-ಕುಂಕುಮ ಮತ್ತು ಇತರೆ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್ಗಳಲ್ಲಿ ಬಳಸಬಾರದು ಎಂದು ಹೊರಡಿಸಿರುವ ಆದೇಶ ಇದು ಹೊಸತೇನಲ್ಲ. ಇವುಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ… pic.twitter.com/5QguMBgWg0
— Siddaramaiah (@siddaramaiah) October 19, 2023