ತುಮಕೂರು: ಕಲ್ಪತರು ನಾಡು ತುಮಕೂರಿನಲ್ಲಿ ಹಂತಕಪಡೆ ಅಟ್ಟಹಾಸ ಮೆರೆದಿದೆ. ತುಮಕೂರು ನಗರದ ಬಂಡಿಮನೆ ಚೌಟ್ರಿ ಬಳಿ ಕುಖ್ಯಾತ ರೌಡಿಶೀಟರ್ ಮಾರುತಿ ಅಲಿಯಾಸ್ ಪೊಲಾರ್ಡ್ (34) ಹತ್ಯೆ ನಡೆದಿದೆ.
ಹಟ್ಟಿ ಮಂಜ ಕೊಲೆ ಪ್ರಕರಣ ಸೇರಿದಂತೆ ಹಲವು ಕೇಸ್ಗಳಲ್ಲಿ ಕೊಡಿಗೇನಹಳ್ಳಿ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿದ್ದ ಮಾರುತಿ ಭಾಗಿಯಾಗಿದ್ದ. ಘಟನಾ ಸ್ಥಳಕ್ಕೆ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್, ಎಎಸ್ಪಿ ಮರಿಯಪ್ಪ ಹಾಗೂ ಡಿವೈಎಸ್ಪಿ ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಿಲಕ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಶನಿವಾರ ರಾತ್ರಿ ಸ್ನೇಹಿತರ ಗ್ಯಾಂಗ್ ಜೊತೆ ಮಂಜ ಕುಡಿದು ಗಲಾಟೆ ಮಾಡಿದ್ದ ಎನ್ನಲಾಗಿದೆ. ಸ್ವಲ್ಪ ಹೊತ್ತಿನಲ್ಲೇ ಈತ ಕೊಲೆಯಾಗಿದ್ದು ಪರಿಚಿತರಿಂದಲೇ ಈತ ಕೊಲೆಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.