ಬೆಂಗಳೂರು: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇರುವಾಗ ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ. ಬೆಂಗಳೂರಿನಲ್ಲಿಂದು ಜೆಡಿಎಸ್ ನಾಯಕರು, ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಕಾರ್ಯಕ್ರಮ ಗಮನಸೆಳೆಯಿತು.
ಶಿವಮೊಗ್ಗದ ಜೆಡಿಎಸ್ ಮುಖಂಡ ಶ್ರೀಕಾಂತ್, ನಾಗರಾಜ್, ಪಾಲಾಕ್ಷ, ತುಮಕೂರಿನ ಶಫಿ ಅಹ್ಮದ್, ಫಾರ್ಜಾನ ತಮ್ಮ ಅಪಾರ ಬೆಂಬಲಿಗರ ಜತೆ ಡಿಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕೆಪಿಸಿಸಿ ಕಚೇರಿಯ ಇಂದಿರಾ ಭವನದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಬಿ.ಎನ್ ಚಂದ್ರಪ್ಪ, ಸಚಿವ ಮಧು ಬಂಗಾರಪ್ಪ, ಮಾಜಿ ಸಚಿವ ಜಯಚಂದ್ರ, ಗೀತಾ ಶಿವರಾಜ್ ಕುಮಾರ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.