ಬೆಂಗಳೂರು: ರಾಜ್ಯ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿ ಬಿಜೆಪಿ ಜೊತೆಗಿನ ಮೈತ್ರಿ ಕಸರತ್ತಿಗೆ ರೋಚಕತೆ ತುಂಬಿದ್ದಾರೆ.
ಈ ಭೇಟಿ ವೇಳೆ ನಿಖಿಲ್ ಕುಮಾರಸ್ವಾಮಿ ಅವರು ಸಿಎಂ ಯೋಗಿಗೆ ರಾಮ-ಲಕ್ಷ್ಮಣ-ಸೀತೆ ವಿಗ್ರಹ ನೀಡಿ ಗಮನಸೆಳೆದಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ನಿಖಿಲ್ ಕುಮಾರಸ್ವಾಮಿ, ಲೋಕಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಆಗಿರುವ ಜೆಡಿಎಸ್–ಬಿಜೆಪಿ ಮೈತ್ರಿಯ ಬಗ್ಗೆ ಚರ್ಚಿಸಲಾಯಿತು. ಇದು ಅತ್ಯಂತ ಉತ್ತಮ ಬೆಳವಣಿಗೆ ಎಂದು ಅವರು ಸಂತಸ ವ್ಯಕ್ತಪಡಿಸಿದರು. ಇದೇ ವೇಳೆ ಉತ್ತರ ಪ್ರದೇಶ ರಾಜಕಾರಣದ ಹಲವಾರು ಬೆಳವಣಿಗೆಗಳನ್ನು ಅವರು ಹಂಚಿಕೊಂಡರು. ಅವರು ಅತ್ಯಂತ ಪ್ರೀತಿ, ವಾತ್ಸಲ್ಯದಿಂದ ನನ್ನನ್ನು ಬರಮಾಡಿಕೊಂಡು ಆಶೀರ್ವದಿಸಿದರು. ಪ್ರೀತಿಯಿಂದ ಸತ್ಕರಿಸಿದ ನಿಮಗೆ ಧನ್ಯವಾದಗಳು ಯೋಗಿ ಜೀ…’ ಎಂದು ನಿಖಿಲ್ ಫೋಸ್ ಹಂಚಿಕೊಂಡಿದ್ದಾರೆ.