ಬೆಂಗಳೂರು: ಉಚಿತಗಳ ಯೋಜನೆ ಮೂಲಕ ರಾಜ್ಯದ ಜನರ ಗಮನ ಕೇಂದ್ರೀಕರಿಸಿರುವ ಸಿದ್ದರಾಮಯ್ಯ ಸರ್ಕಾರ ಇದೀಗ ಕಾಂಗ್ರೆಸ್ ಕಾರ್ಯಕರ್ತರಿಗೂ ಬಂಪರ್ ಕೊಡುಗೆ ನೀಡಲು ತಯಾರಿ ನಡೆಸಿದೆ.
ಪಕ್ಷದ ಶಾಸಕರಿಗೆ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಲು ಶ್ರಮಿಸಿದ ನಾಯಕರಿಗೆ ನಿಗಮ ಮಂಡಳಿಗಳಲ್ಲಿ ಸೂಕ್ತ ಸ್ಥಾನಮಾನ ನೀಡಲು ಸಿಎಂ ಸಿದ್ದರಾಮಯ್ಯ ಅವರು ಕಸರತ್ತು ನಡೆಸಿದ್ದಾರೆ. ನಿಗಮ-ಮಂಡಳಿ ನೇಮಕಾತಿ ಪಟ್ಟಿ ಸಿದ್ದವಾಗಿದ್ದು ಯಾವುದೇ ಸನಯದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಈ ನಡುವೆ, ಮಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮಾಹಿತಿ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ, ಹಲವು ಸಮಯದಿಂದ ಬಾಕಿ ಇರುವ ನಿಗಮ – ಮಂಡಳಿಗಳಿಗೆ ಶೀಘ್ರ ಅಧ್ಯಕ್ಷರ ನೇಮಕ ಮಾಡಲಾಗುವುದು. ಮೊದಲ ಹಂತದಲ್ಲಿ ಶಾಸಕರಿಗೆ ಆದ್ಯತೆ ನೀಡಿ, ಎರಡನೇ ಹಂತದಲ್ಲಿ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.