ಬೆಂಗಳೂರು: ಬಿಜೆಪಿ ನಾಯಕರು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಹೇಳಿಕೆ ನೀಡುತ್ತಿರುವುದನ್ನು ಖಂಡಿಸಿ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಬಳಸಿರುವ ಪದವನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.
ಬಿಜೆಪಿ ಪಕ್ಷದ ಕೆಲವು ನಾಯಕರು ಮತ್ತೆ ಆಪರೇಷನ್ ಕಮಲಕ್ಕೆ ಮುಂದಾಗಿ ಬ್ಲಾಕ್ ಮೇಲ್ ಹೇಳಿಕೆ ನೀಡುತ್ತಿದ್ದಾರೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಆರ್, ಅಶೋಕ್, ಅಶ್ವಥ್ ನಾರಾಯಣ, ಸಿ.ಪಿ.ಯೋಗೇಶ್ವರ್, ಹಾಗೂ ಜೆಡಿಎಸ್ ಪಕ್ಷದ ಎಚ್.ಡಿ. ಕುಮಾರಸ್ವಾಮಿ ರವರ ಬ್ಲಾಕ್ ಮೇಲ್ ತಂತ್ರವನ್ನು ಕಾಂಗ್ರೆಸ್ ನಾಯಕರು ಖಂಡಿಸಿದರು.
ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಕೆಲವು ನಾಯಕರು ಮಾನ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಕುತಂತ್ರ ರಾಜಕೀಯ ಮಾಡುವ ಮೂಲಕ ಅವರ ವಿರುದ್ಧ ಷಡ್ಯಂತರವನ್ನು ಮಾಡುತ್ತಿದ್ದಾರೆ ಅದನ್ನ ಎದುರಿಸುವ ಶಕ್ತಿ ಡಿ.ಕೆ ಶಿವಕುಮಾರ್ ಅವರಿಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಇದೆ, ಜನಪರ ಆಡಳಿತ ನೀಡುತ್ತಿರುವ ಕಾಂಗ್ರೆಸ್ ಸರ್ಕಾರದ ಏಳಿಗೆಯನ್ನು ಸಹಿಸದ ಬಿಜೆಪಿಗರು ಮತ್ತೆ ಆಪರೇಷನ್ ಕಮಲಕ್ಕೆ ಮುಂದಾಗಿದ್ದಾರೆ ಇದರ ಬಗ್ಗೆ ಸಾಕಷ್ಟು ಕಾಂಗ್ರೆಸ್ ಶಾಸಕರು ಆಪರೇಷನ್ ಕಮಲದ ಮಾಹಿತಿಯನ್ನು ನೀಡಿದ್ದಾರೆ,
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸ್ಥಿತಿ ತಲುಪಲಿದೆ ಕರ್ನಾಟಕ ರಾಜ್ಯದಲ್ಲಿ ಆದ್ದರಿಂದ ಬಿಜೆಪಿ ಜೆಡಿಎಸ್ ಒಪ್ಪಂದ ಮಾಡಿಕೊಂಡು ಕಾಂಗ್ರೆಸ್ ಸರ್ಕಾರದ ವಿರುದ್ಧ ಆದಾರ ರಹಿತ ಆರೋಪ ಹಾಗೂ ಟೀಕೆಯನ್ನು ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆಕ್ರೋಶ ಹೊರಹಾಕಿದರು.
ರಮೇಶ್ ಜಾರಕಿಹೊಳಿ ಇಂದು ಬೆಳಗಾವಿಯಲ್ಲಿ ನೀಡಿರುವ ಹೇಳಿಕೆಯನ್ನು ಗಮನಿಸಿದರೆ ಬಿಜೆಪಿ ಮತ್ತೆ ಇಡಿ ಐಟಿ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುವುದು ಎತ್ತಿ ತೋರುತ್ತಿದೆ,
ಬಿಜೆಪಿಯ ಯಾವುದೇ ಕುತಂತ್ರವನ್ನು ಎದುರಿಸಲು ಕಾಂಗ್ರೆಸ್ ಸರ್ಕಾರ ಪಕ್ಷ ಕಾರ್ಯಕರ್ತರು ಸಿದ್ಧವಾಗಿದ್ದೇವೆ ಎಂದು ಈ ಮೂಲಕ ರಮೇಶ್ ಜಾರಕಿಹೊಳಿಗೆ ಪ್ರತಿಭಟನೆ ಮೂಲಕ ಎಚ್ಚರಿಕೆಯನ್ನು ನೀಡಿದರು.