ಬೆಂಗಳೂರು: ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ತಂದೆ, ಅಂಗಡಿಮಾರ್ ಕೃಷ್ಣ ಭಟ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಸಂತಾಪ ಸೂಚಿಸಿದ್ದಾರೆ.
ಸಾಂಪ್ರದಾಯಿಕ ಕೃಷಿಕರೂ, ವೈದಿಕ ವಿದ್ವಾಂಸರೂ ಆಗಿದ್ದ ಅವರು, ತುಳು ಲಿಪಿಕಾರರಾಗಿ, ಪಂಚಾಂಗ ಕರ್ತರಾಗಿ ಕೆಲಸ ಮಾಡಿದವರು ಎಂದು ತಿಳಿಸಿದ್ದಾರೆ. ವೇದಾಧ್ಯಯನ, ಸಂಹಿತಾ ಯಾಗಗಳ ವಿಚಾರದಲ್ಲಿ ಸಾಧಕರಾಗಿದ್ದರು. ಇವರ ಸಾಧನೆಗಾಗಿ ಹಲವು ಪ್ರಶಸ್ತಿ, ಪುರಸ್ಕಾರಗಳು ಪ್ರಾಪ್ತವಾಗಿದ್ದವು ಎಂದು ನಳಿನ್ ಕುಮಾರ್ ಹೇಳಿದ್ದಾರೆ.