ಶ್ರೀನಗರ: ಪ್ರಪಾತಕ್ಕೆ ಉರುಳಿ ಬಿದ್ದ ಬಸ್; 30 ಮಂದಿ ದುರ್ಮರಣ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಬುಧವಾರ ಬಸ್ಸು ಕಂದಕಕ್ಕೆ ಬಿದ್ದು 30 ಮಂದಿ ಸಾವನ್ನಪ್ಪಿದ್ದಾರೆ.

ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ 300 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ. ಬಟೋಟ್-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರುಂಗಲ್-ಅಸ್ಸಾರ್ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು ನತದೃಷ್ಟ ಬಸ್ಸಿನಲ್ಲಿ ಸುಮಾರು 40 ಮಂದಿ ಪ್ರಯಾಣಿಕರು ಇದ್ದರೆಂದು ಹೇಳಲಾಗಿದ್ದು ಹಲವರು ಗಾಯಗೊಂಡಿದ್ದಾರೆ.

Related posts