ದಾವಣಗೆರೆ: ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರು ಮತ್ತೊಮ್ಮೆ ಬಂಧನಕ್ಕೊಳಗಾಗಿದ್ದಾರೆ. ಎರಡನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ನ್ಯಾಯಾಲಯದ ಅರೆಸ್ಟ್ ವಾರೆಂಟ್ ಆಧರಿಸಿ ಪೊಲೀಸರು ಮುರುಘಾ ಶರಣರನ್ನು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ಶ್ರೀಗಳ ಬಂಧನ ಆದೇಶಕ್ಕೆ ಹೈಕೋರ್ಟ್ ತಡೆನೀಡಿದೆ.
ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ದಾವಣಗೆರೆಯ ವಿರಕ್ತ ಮಠಕ್ಕೆ ತೆರಳಿ ಮುರುಘಾ ಶರಣರನ್ನು ಬಂಧಿಸಿದ್ದಾರೆ. ಮೊದಲನೇ ಪೋಕ್ಸೋ ಪ್ರಕರಣದಲ್ಲಿ ಒಂದು ವರ್ಷ ಜೈಲುವಾಸ ಅನುಭವಿಸಿದ್ದ ಮುರುಘಾ ಶರಣರು ನವೆಂಬರ್ 16ರಂದು ಜಮೀನಿನಲ್ಲಿ ಬಿಡುಗಡೆಯಾಗಿದ್ದರು. ಜೈಲಿನಿಂದ ಹೊರಬಂದ ನಾಲ್ಕೇ ದಿನದಲ್ಲಿ ಶರಣರನ್ನು ಜಿಲ್ಲಾ ನ್ಯಾಯಾಲಯದ ಆದೇಶದಂತೆ ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮತ್ತೊಮ್ಮೆ ಶ್ರೀಗಳ ಬಂಧನವಾಗಿದೆ.
ಈ ನಡುವೆ, ಶ್ರೀಗಳ ಬಂಧನ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಜಿಲ್ಲಾ ನ್ಯಾಯಾಲಯದ ಆದೇಶದಿಂದ ಆರೋಪಿಯಾಗಿರುವ ಮುರುಘಾ ಶರಣರಶ್ರೀಗಳಿಗೆ ಅನ್ಯಾಯವಾಗಿದ್ದು, ಜಾಮೀನು ರಹಿತ ಬಂಧನದ ವಾರೆಂಟ್ಗೆ ತಡೆ ನೀಡಿ, ಆದೇಶ ಉಲ್ಲಂಘಿಸಿ ಚಿತ್ರದುರ್ಗಕ್ಕೆ ಕರೆತಂದಿರುವುದು ತಪ್ಪಾಗಿದೆ. ಕೂಡಲೇ ಶ್ರೀಗಳನ್ನು ಬಿಡುಗಡೆಗೊಳಿಸುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ.