ದೊಡ್ಡಬಳ್ಳಾಪುರ: ಜಿಲ್ಲಾ ತಂಬಾಕು ನಿಯಂತ್ರಣ ಘಟಕ ದಾಳಿ: ಪ್ರಕರಣ ದಾಖಲು

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಜಿಲ್ಲಾ ಮಟ್ಟದ ತನಿಖಾ ತಂಡದ ಅಧಿಕಾರಿಗಳು ಇಂದು (ಶುಕ್ರವಾರ) ಕ್ಷಿಪ್ರ ಕಾರ್ಯಾಚರಣೆ ನಡೆಸಿದೆ.

COTPA-2003 ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ COTPA ದಾಳಿಯನ್ನು ನಡೆಸಿರುವ ಅಧಿಕಾರಿಗಳು ಸೆಕ್ಷನ್ 4ರ ಅಡಿಯಲ್ಲಿ ಒಟ್ಟು 15 ಪ್ರಕರಣಗಳನ್ನು ದಾಖಲಿಸಿ 3500 ರೂಪಾಯಿ ದಂಡವನ್ನು ಸಂಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರರಾದ ಡಾ.ವಿದ್ಯಾ ರಾಣಿ ಪಿ.ಎಸ್, ಆರೋಗ್ಯ ನಿರೀಕ್ಷಣಾಧಿಕಾರಿ ಶಿವಕುಮಾರ್, ಆರೋಗ್ಯ ಸಿಬ್ಬಂದಿ ಧನಂಜಯ್ ಹಾಗೂ ಪೊಲೀಸ್ ಸಿಬ್ಬಂದಿ ನಾಗರಾಜು ಹಾಜರಿದ್ದರು.

Related posts