ಮಲ್ಕನಗಿರಿ: ಒಡಿಶಾದ ಮಲ್ಕನಗಿರಿ ಜಿಲ್ಲೆಯಲ್ಲಿ 13 ಮಂದಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಸಿಮೆಂಟ್ ತುಂಬಿದ ಟ್ರಕ್ ಘಾಟ್ ರಸ್ತೆಯಲ್ಲಿ ಪಲ್ಟಿಯಾಗಿ ಆರು ಕಾರ್ಮಿಕರು ಸಾವನ್ನಪ್ಪಿ ದ್ದಾರೆ. ಭೀಕರ ಅಪಘಾತದಲ್ಲಿ ಏಳು ಮಂದಿ ಗಾಯಗೊಂಡಿದ್ದಾರೆ. ಸ್ವಾಭಿಮಾನ್ ಅಂಚಲಾದ ಜೋಡಂಬಾ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ ಎಂದು ಮಲ್ಕಾನ್‌ಗಿರಿ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ನಿತೇಶ್ ವಾಧ್ವಾನಿ ತಿಳಿಸಿದ್ದಾರೆ.
ಸಿಮೆಂಟ್ ಮತ್ತು ಕಬ್ಬಿಣದ ಸರಳುಗಳನ್ನು ತುಂಬಿದ್ದ ಲಾರಿ ಹಂತಲಗೂಡ ಎಂಬಲ್ಲಿ ಅಪಘಾತಕ್ಕೀಡಾಗಿದ್ದು, ಹಲವು ಕಾರ್ಮಿಕರನ್ನು ಸಿಮೆಂಟ್ ಚೀಲಗಳ ಅಡಿಯಲ್ಲಿ ಸಿಲುಕಿದ್ದರು. ಈ ಕಾರ್ಮಿಕರನ್ನು ಹೊರತೆಗೆಯಲು ಪೊಲೀಸರು ಮತ್ತು ಸ್ಥಳೀಯರು ಶತಪ್ರಯತ್ನ ಮಾಡಿದ್ದಾರೆ.
ಐವರು ಕಾರ್ಮಿಕರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದು, ಗಾಯಗೊಂಡಿದ್ದ ಮತ್ತೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಮೃತ ಕಾರ್ಮಿಕರ ಕುಟುಂಬಕ್ಕೆ ರೂ.3 ಲಕ್ಷ ಪರಿಹಾರವನ್ನು ಘೋಷಿಸಿದದ್ದಾರೆ.