ಡಿಕೆಶಿ ವಿರುದ್ದದ ಸಿಬಿಐ ತನಿಖೆಯ ಆದೇಶ ವಾಪಾಸ್; ಸರ್ಕಾರದ ತೀರ್ಮಾನ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಸಿಬಿಐ ತನಿಖೆಯ ವಿಚಾರದಲ್ಲಿ ಬಿಗ್ ರಿಲೀಫ್ ಸಿಕ್ಕಿದೆ. ಕೆಲವು ದಿನಗಳ ಹಿಂದಷ್ಟೇ ಹಿಂದಿನ ಸರ್ಕಾರ ಸಿಬಿಐ ತನಿಖೆಗೆ ವಹಿಸಲಾಗಿದ್ದ ತನಿಖೆಯನ್ನು ಸಿದ್ದರಾಮಯ್ಯ ಸಂಪುಟ ಹಿಂಪಡೆಯುವ ತೀರ್ಮಾನ ಕೈಗೊಂಡಿತ್ತು. ಆ ತೀರ್ಮಾನವನ್ನು ಹೈಕೋರ್ಟ್ ಒಪ್ಪಿಕೊಂಡಿದೆ.

ಡಿಸಿಎಂ ಡಿ.ಕೆ.ಶಿವಕುಮಾರ್‌ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣ ವಿಚಾರಣೆಯನ್ನು ಬುಧವಾರ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅವರನ್ನೊಳಗೊಂಡ ನೇತೃತ್ವದ ವಿಭಾಗೀಯ ಪೀಠ ಬುಧವಾರ ಕೈಗೆತ್ತಿಕೊಂಡಿತು. ರಾಜ್ಯ ಸರ್ಕಾರದ ಆದೇಶವನ್ನು ಇದುವರೆಗೂ ಯಾರೂ ಪ್ರಶ್ನೆ ಮಾಡಿಲ್ಲ. ಹೀಗಾಗಿ ಸಿಬಿಐ ವಾದ ಪರಿಗಣಿಸಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯ ವ್ಯಕ್ತಪಡಿಸಿತು. ಜೊತೆಗೆ, ಡಿ.ಕೆ.ಶಿವಕುಮಾರ್‌ ವಿರುದ್ಧದ ಸಿಬಿಐ ತನಿಖೆ ಆದೇಶ ಹಿಂಪಡೆದ ರಾಜ್ಯ ಸರ್ಕಾರದ ನಿರ್ಧಾರವನ್ನು ಹೈಕೋರ್ಟ್‌ ಎತ್ತಿ ಹಿಡಿಯಿತು.

Related posts