ದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತದಾನ ಮುಕ್ತಾಯವಾಗಿದ್ದು, ಇದೀಗ ಸೋಲು-ಗೆಲುವುಗಳ ಲೆಕ್ಕಾಚಾರ ಸಾಗಿದೆ. ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಈ ಮಿನಿ ಮಹಾಸಮರದ ಮತದಾನ ಮುಕ್ತಾಯವಾಗುತ್ತಿದ್ದಂತೆಯೇ ಬಹಿರಂಗವಾಗಿರುವ ಎಕ್ಸಿಟ್ ಪೋಲ್ ಸಮೀಕ್ಷೆಯು ತೀವ್ರ ಕುತೂಹಲ ಸೃಷ್ಟಿಸಿದೆ.
ಚುನಾವಣೋತ್ತರ ಸಮೀಕ್ಷೆಗಳು ರಾಜಸ್ಥಾನದಲ್ಲಿ ಬಿಜೆಪಿ ಗೆಲ್ಲಲಿದೆ ಎಂಬ ಸುಳಿವು ನೀಡಿದೆ. ಬಹುತೇಕ ಸಮೀಕ್ಷೆಗಳು ಬಿಜೆಪಿ ಗೆಲ್ಲುವ ಸೂಚನೆ ನೀಡಿದೆ. ರಾಜಸ್ತಾನ ವಿಧಾನಸಭೆಯ ಒಟ್ಟು 199 ಸ್ಥಾನಗಳ ಪೈಕಿ ಬಿಜೆಪಿಗೆ ಸರಳ ಬಹುಮತ ಸಿಗುವ ಸಾಧ್ಯತೆಗಳ ಬಗ್ಗೆ ವಿಶ್ಲೇಷಿಸಿದೆ.
ಜನ್ಕೀ ಬಾತ್ಸಮೀಕ್ಷೆ ಪ್ರಕಾರ ಬಿಜೆಪಿ 100-122 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ 62-85 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ.
ಟೈಮ್ಸ್ ನೌ ಸಮೀಕ್ಷೆ ಪ್ರಕಾರ ಬಿಜೆಪಿ 108-128 ಸ್ಥಾನಗಳನ್ನು ಗೆಲ್ಲಲಿದೆ, ಕಾಂಗ್ರೆಸ್ 56-72 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ.
ಪೂಲ್ಸ್ಟಾರ್ಟ್ ಸಮೀಕ್ಷೆ ಪ್ರಕಾರ ಬಿಜೆಪಿ 100-110 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ 90-100 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ.
ಇಂಡಿಯಾ ಟುಡೇ ಸಮೀಕ್ಷೆ ಪ್ರಕಾರ ಬಿಜೆಪಿ 80-100 ನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ 86-106, ಬಿಎಸ್ಪಿ 1-2 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ.