ಬೆಂಗಳೂರು: ಗುತ್ತಿಗೆದಾರ ಅಂಬಿಕಾಪತಿ ಸಾವು ಬಗ್ಗೆ ಉನ್ನತಮಟ್ಟದ ತನಿಖೆಯ ಅಗತ್ಯವಿದೆ ಎಂದು ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಗುತ್ತಿಗೆದಾರ ಅಂಬಿಕಾಪತಿ ಸಾವು ಸಹಜವಲ್ಲವೆಂದಿರುವ ಕೆಂಪಣ್ಣನವರ ಹೇಳಿಕೆಯನ್ನು ಸರ್ಕಾರ ಹಾಗು ಮಾಧ್ಯಮಗಳು ಗಂಭೀರವಾಗಿ ಪರಿಗಣಿಸಬೇಕು ಎಂದಿರುವ ಯತ್ನಾಳ್, ಅಂಬಿಕಾಪತಿ ಮನೆಯಲ್ಲಿ 40 ಕೋಟಿ ಹಣ ಆದಾಯ ತೆರಿಗೆ ದಾಳಿಯ ವೇಳೆ ಸಿಕ್ಕಿತ್ತು. ಈ ಹಣ ಸರ್ಕಾರ ಪ್ರಭಾವಿ ಮಂತ್ರಿ ಹಾಗು ಒಬ್ಬ ಪ್ರಭಾವಿ ರಾಜಕಾರಣಿಯ ಮಗನಿಗೆ ಸೇರಿದ್ದು ಎಂಬ ಸುದ್ದಿಯೂ ಇದೆ ಎಂದು ಬೊಟ್ಟು ಮಾಡಿದ್ದಾರೆ.
ಆದಾಯ ತೆರಿಗೆ ಇಲಾಖೆಗೆ ಪ್ರಕರಣದ ಕುರಿತು ಹೇಳಿಕೆ ನೀಡಿದ್ದ ಅಂಬಿಕಾಪತಿ ಯಾರ ಹೆಸರುಗಳನ್ನೂ ಹೇಳಿದ್ದಾರೋ, ಆ ಹಣ ಯಾರದ್ದು ಎಂದು ಹೇಳಿದ್ದರೋ ಎಂಬ ಅಂಶವು ತನಿಖೆಯಲ್ಲಿ ಬಯಲಾಗಬೇಕಿದೆ.
ಅಂಬಿಕಾಪತಿಯ ಸಾವಿನ ಬಗ್ಗೆಯೂ ಕೂಲಂಕುಷವಾಗಿ ತನಿಖೆಯಾಗಬೇಕು. 2
— Basanagouda R Patil (Yatnal) (ಮೋದಿಯವರ ಕುಟುಂಬ) (@BasanagoudaBJP) November 30, 2023
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಯತ್ನಾಳ್, ಆದಾಯ ತೆರಿಗೆ ಇಲಾಖೆಗೆ ಪ್ರಕರಣದ ಕುರಿತು ಹೇಳಿಕೆ ನೀಡಿದ್ದ ಅಂಬಿಕಾಪತಿ ಯಾರ ಹೆಸರುಗಳನ್ನೂ ಹೇಳಿದ್ದಾರೋ, ಆ ಹಣ ಯಾರದ್ದು ಎಂದು ಹೇಳಿದ್ದರೋ ಎಂಬ ಅಂಶವು ತನಿಖೆಯಲ್ಲಿ ಬಯಲಾಗಬೇಕಿದೆ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಅಂಬಿಕಾಪತಿಯ ಸಾವಿನ ಬಗ್ಗೆಯೂ ಕೂಲಂಕುಷವಾಗಿ ತನಿಖೆಯಾಗಬೇಕು ಎಂದವರು ಹೇಳಿದ್ದಾರೆ.