ಬೆಂಗಳೂರು (ಗ್ರಾ): ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಆಟೋ ಚಾಲಕರು ಮತ್ತು ಮಾಲೀಕರ ವತಿಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ದ್ವಜಾರೋಹಣ ಹಾಗೂ ಸರತಿ ಸಾಲಿನಲ್ಲಿ ಅಲಂಕರಿಸಿದ್ದ ಆಟೋಗಳಿಗೆ ಪೂಜೆ ಮತ್ತು ಗಾಯನ ಮಾಡಿ ಕಾರ್ಯಕ್ರಮ ಉದ್ಘಾಟನೆ ಮಾಡಲಾಯಿತು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಆಟೋ ಚಾಲಕ ರಾಮಣ್ಣ ಸುಮಾರು 20 ವರ್ಷಗಳಿಂದ ಊರಿನ ಗ್ರಾಮಸ್ಥರು ಹಾಗೂ ಆಟೋ ಚಾಲಕರು ಹಾಗೂ ಮಾಲೀಕರ ಎಲ್ಲರ ಸಹಕಾರದಿಂದ ಸತತವಾಗಿ ಕನ್ನಡ ರಾಜ್ಯೋತ್ಸವ ಆಚರಿಸಿಕೊಂಡು ಬರುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನು ವಿಜೃಂಭಣೆಯಿಂದ ಆಚರಿಸಲು ಕನ್ನಡ ತಾಯಿ ಭುವನೇಶ್ವರಿ ಹೆಚ್ಚಿನ ಶಕ್ತಿ ನೀಡಲಿ ಎಂದರು.
ಈ ವೇಳೆ ಕೋನಘಟ್ಟ ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ, ಆರಾಧ್ಯ, ಆಟೋ ಚಾಲಕರು ಮತ್ತು ಮಾಲೀಕರು ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.