ಬೆಂಗಳೂರು: ರಾಜ್ಯದ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಮತ್ತು ಸಿಬ್ಬಂದಿಗೆ ಅಕ್ಟೋಬರ್ ತಿಂಗಳ ವೇತನ ಇನ್ನೂ ಕೈ ಸೇರಿಲ್ಲ. ನವೆಂಬರ್ ತಿಂಗಳು ಮುಗಿಯುತ್ತಾ ಬಂದರೂ ವೇತನ ಬಂದಿಲ್ಲ ಎಂದು ಉಪನ್ಯಾಸಕರು ಮತ್ತು ಸಿಬಂದಿ ಅಳಲು ತೋಡಿಕೊಳ್ಳುತ್ತಿದ್ದಾರೆ.
ರಾಜ್ಯದಲ್ಲಿ ಸುಮಾರು 1,971 ಕಾಲೇಜುಗಳಿದ್ದು, 18 ಸಾವಿರಕ್ಕೂ ಹೆಚ್ಚು ಉಪನ್ಯಾಸಕರು ಸರ್ಕಾರದಿಂದಲೇ ನೇರವಾಗಿ ವೇತನ ಪಡೆಯುತ್ತಿದ್ದಾರೆ.
ಸಾಮಾನ್ಯವಾಗಿ ತಿಂಗಳ ಮೊದಲ ದಿನವೇ ವೇತನವಾಗುತ್ತದೆ, ಗರಿಷ್ಠ 5ರಿಂದ 10 ತಾರೀಕಿನೊಳಗೆ ವೇತನವಾಗುತ್ತಿತ್ತು. ಆದ್ರೆ ಈ ಬಾರಿ ವೇತನಕ್ಕೆ ಮೀಸಲಾಗಿರುವ ಅನುದಾನವನ್ನು ತೆಗೆಯುವ ವೇಳೆ ತಾಂತ್ರಿಕ ತೊಂದರೆ ಉಂಟಾಗಿರುವುದರಿಂದ ಸಂಬಳ ವಿಳಂಬವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂದಿನ ವಾರದಲ್ಲಿ ವೇತನ ಸಮಸ್ಯೆ ಬಗೆಹರಿಯಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.