ನವದೆಹಲಿ: ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳ ಗಲ್ಲು ಶಿಕ್ಷೆ ಕುರಿತು ತಿಹಾರ್ ಜೈಲಿನ ಅಧಿಕಾರಿಗಳು ಸಲ್ಲಿಸಿದ ಅರ್ಜಿಯನ್ನು ದೆಹಲಿ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಅಪರಾಧಿಗಳನ್ನು ಗಲ್ಲಿಗೇರಿಸಲು ಹೊಸ ದಿನಾಂಕ ನಿಗದಿಗೊಳಿಸುವಂತೆ ಕೋರಿ ತಿಹಾರ್ ಜೈಲಿನ ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದರು.
ದೆಹಲಿ ಹೈಕೋರ್ಟ್ ಫೆಬ್ರವರಿ 5ರಂದು ನೀಡಿದ ತೀರ್ಪಿನಂತೆ ಒಂದು ವಾರದೊಳಗೆ ಕಾನೂನು ಪ್ರಕ್ರಿಯೆಗೊಳಿಸಬೇಕು ಎಂದು ಹೆಚ್ಚುವರಿ ಸೆಷನ್ಸ್ ಜಡ್ಜ್ ಸ್ಪಷ್ಟವಾಗಿ ಹೇಳಿದರು.
ಕಾನೂನು ಬದುಕುವುದಕ್ಕೆ ಅವಕಾಶ ನೀಡಿದೆ . ಹೈಕೋರ್ಟ್ ಅವರಿಗೆ ಒಂದು ವಾರದ ಕಾಲಾವಕಾಶ ನೀಡಿದ್ದು, ಅಪರಾಧಿಗಳು ಅಷ್ಟರೊಳಗೆ ಕಾನೂನು ಪ್ರಕಾರ ಏನೇನು ಮಾಡಬೇಕೋ ಅದನ್ನು ಮಾಡಿಮುಗಿಸಬೇಕು. ಹೀಗಿರುವಾಗ ಈ ರೀತಿ ಮತ್ತೊಮ್ಮೆ ದಿನಾಂಕ ನಿಗದಿ ಮಾಡಲು ಸಾಧ್ಯವಿಲ್ಲ ಎಂದು ನ್ಯಾಯಾಧೀಶರು ಹೇಳಿದರು.