ನವದೆಹಲಿ: ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮ ಆರೋಪ ಎದುರಿಸುತ್ತಿರುವ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖಂಡ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
ಪ್ರಕರಣ ಸಂಬಂಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯವು ಭ್ರಷ್ಟಾಚಾರ ಮತ್ತು ಮನಿ ಲಾಂಡರಿಂಗ್ ಪ್ರಕರಣದಲ್ಲಿ ತನಿಖೆ ನಡೆಸುತ್ತಿದ್ದು ಆರೋಪ ಎದುರಿಸುತ್ತಿರುವ ಆಪ್ ಮುಖಂಡ ಮನೀಶ್ ಸಿಸೋಡಿಯಾ ಬಂಧನದಲ್ಲಿದ್ದಾರೆ. ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ..
ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯಪೀಠ ಈ ಆದೇಶ ನೀಡಿದೆ. ಈ ಮೂಲಕ ಸಿಸೋಡಿಯಾರ 17 ತಿಂಗಳ ಸೆರೆವಾಸ ಕೊನೆಗೂ ಅಂತ್ಯಕಂಡಿದೆ.