ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ಬಂದ್
ಬೆಂಗಳೂರು: ಶ್ರೀಕೃಷ್ಣ ಜನ್ಮಾಷ್ಟಮಿ ದಿನವಾದ ಸೋಮವಾರ ರಾಜಧಾನಿ ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿರ್ಬಂಧಿಸಲಾಗಿದೆ.
ಆಗಸ್ಟ್ 25 ಸೋಮವಾರದಂದು ಕೃಷ್ಣ ಜನ್ಮಾಷ್ಟಮಿ ದಿನದಂದು ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.
ಕಸಾಯಿಖಾನೆಯಲ್ಲಿ ಪ್ರಾಣಿವಧೆ ಮಾಡದಂತೆ ಹಾಗೂ ಅಂಗಡಿ- ಮಳಿಗೆಗಳಲ್ಲಿ ಮಾಂಸ ಮಾರಾಟ ಮಾಡದಂತೆ ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.