ಬೆಂಗಳೂರು: ಬಿಜೆಪಿಯ ರಾಜ್ಯ ಘಟಕವು ತನ್ನ ಸದಸ್ಯತ್ವ ಅಭಿಯಾನವನ್ನು ಬುಧವಾರ ಪ್ರಾರಂಭಿಸಿದೆ.
ಅಭಿಯಾನಕ್ಕೆ ಚಾಲನೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯದ ಪ್ರತಿ ಬೂತ್‌ನಲ್ಲಿ ಕನಿಷ್ಠ 400 ಹೊಸ ಸದಸ್ಯರನ್ನು ನೇಮಕ ಮಾಡುವ ಗುರಿಯನ್ನು ಪಕ್ಷ ಹೊಂದಿದೆ ಎಂದರು.
ಮಾಜಿ ಪ್ರಧಾನಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ಆಚರಣೆ ಸಹಿತ ಪಕ್ಷದ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುತ್ತೇವೆ, ಜೊತೆಗೆ ರಾಜ್ಯವನ್ನು ಮತ್ತೆ ಬಿಜೆಪಿ ತೆಕ್ಕೆಗೆ ತರುತ್ತೇವೆ ಎಂದವರು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಸದಸ್ಯತ್ವ ಅಭಿಯಾನದ ಯಶಸ್ವಿಗಾಗಿ ಪ್ರತಿ ಬೂತ್‌ಗಳಲ್ಲಿ ಕಾರ್ಯಕರ್ತರನ್ನು ನೇಮಿಸಲಾಗಿದೆ ಎಂದು ವಿಜಯೇಂದ್ರ ತಿಳಿಸಿದರು.