ರಾಯಚೂರಲ್ಲಿ ಸಂಭ್ರಮ, ಸಡಗರದ ಕಲ್ಯಾಣ ಕರ್ನಾಟಕ ಉತ್ಸವ

ರಾಯಚೂರು: 77ನೇ ಕಲ್ಯಾಣ ಕರ್ನಾಟಕ ಉತ್ಸವದ ದಿನಾಚರಣೆ ಅಂಗವಾಗಿ ರಾಯಚೂರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ ಹಾಗೂ ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶವನ್ನು ನೀಡಿದರು.

ಇದೇ ಸಂದರ್ಭದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ, ವಿಧಾನ ಪರಿಷತ್ ಸದಸ್ಯರಾದ ಎ.ವಸಂತಕುಮಾರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ರಾಯಚೂರು ನಗರಸಭೆಯ ಅಧ್ಯಕ್ಷರಾದ ನರಸಮ್ಮ ಮಾಡಗಿರಿ, ಜಿಲ್ಲಾಧಿಕಾರಿ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಮ್ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಎಂ.ಪುಟ್ಟಮಾದಯ್ಯ, ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ, ರಾಯಚೂರು ಸಹಾಯಕ ಆಯುಕ್ತ ಗಜಾನನ ಬಾಳೆ, ಜಿಲ್ಲಾ ಪಂಚಾಯತ್ ಉಪ ನಿರ್ದೇಶಕರಾದ ಪ್ರಕಾಶ್ ಶಿವಪುರೆ, ರಾಯಚೂರು ತಹಶೀಲ್ದಾರ್ ಸುರೇಶ್ ವರ್ಮ, ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಮಹಿಬೂಬ್ ಜಿಲಾನಿ, ರಾಯಚೂರು‌ನಗರಸಭೆಯ‌ ಪೌರಾಯುಕ್ತರಾದ ಗುರುಸಿದ್ದಯ್ಯ ಸ್ವಾಮಿ ಹಿರೇಮಠ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಚಿದಾನಂದ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ವೈ.ವಾಲ್ಮೀಕಿ, ಸಾರ್ವಜನಿಕ ಶಿಕ್ಷ ಣ ಇಲಾಖೆಯ ಉಪ ನಿರ್ದೇಶಕ ಕಾಳಪ್ಪ ಬಡಿಗೇರ, ಯುವಜನ ಸೇವ ಇಲಾಖೆಯ ಸಹಾಯಕ ನಿರ್ದೇಶಕ ವಿರೇಶ್ ನಾಯಕ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜೇಂದ್ರ ಜಲ್ದಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts